ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಗಟು ಹಣದುಬ್ಬರ ಶೇ 3.07ಕ್ಕೆ ಇಳಿಕೆ

Last Updated 14 ಮೇ 2019, 17:21 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಗಟು ಹಣದುಬ್ಬರ ಏಪ್ರಿಲ್‌ನಲ್ಲಿ ಶೇ 3.07ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಾಹಿತಿ ನೀಡಿದೆ.

ಆಹಾರ ಉತ್ಪನ್ನಗಳ ಬೆಲೆ ಗರಿಷ್ಠ ಮಟ್ಟದಲ್ಲಿದ್ದರೂಇಂಧನ ದರ ಇಳಿಕೆ ಮತ್ತು ತಯಾರಿಕಾ ವಸ್ತುಗಳ ಬೆಲೆ ತಗ್ಗಿರುವುದರಿಂದ ಸಗಟು ಹಣದುಬ್ಬರದಲ್ಲಿ ಇಳಿಕೆ ಕಂಡುಬಂದಿದೆ ಎಂದು ಹೇಳಿದೆ.

ಸಗಟು ದರ ಸೂಚ್ಯಂಕ ಆಧರಿಸಿದ (ಡಬ್ಲ್ಯುಪಿಐ) ಹಣದುಬ್ಬರ ಮಾರ್ಚ್‌ನಲ್ಲಿ 3.18ರಷ್ಟಿತ್ತು. 2018ರ ಏಪ್ರಿಲ್‌ನಲ್ಲಿ ಶೇ 3.62ರಷ್ಟಿತ್ತು.

ಆಹಾರ ಉತ್ಪನ್ನಗಳ ಹಣದುಬ್ಬರ ಶೇ 5.68ರಿಂದ ಶೇ 7.37ಕ್ಕೆ ಏರಿಕೆಯಾಗಿದೆ. 2018ರ ಡಿಸೆಂಬರ್‌ನಿಂದಲೂ ಏರಿಕೆಯಾಗುತ್ತಲೇ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT