ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಗಟು ಹಣದುಬ್ಬರ 2022ರ ಡಿಸೆಂಬರ್‌ನಲ್ಲಿ 22 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ

Last Updated 16 ಜನವರಿ 2023, 18:30 IST
ಅಕ್ಷರ ಗಾತ್ರ

ನವದೆಹಲಿ: ಸಗಟು ಹಣದುಬ್ಬರವು 2022ರ ಡಿಸೆಂಬರ್‌ನಲ್ಲಿ 22 ತಿಂಗಳ ಕನಿಷ್ಠ ಮಟ್ಟವಾದ ಶೇಕಡ 4.95ಕ್ಕೆ ಇಳಿಕೆಯಾಗಿದೆ.

ಆಹಾರ ವಸ್ತುಗಳು, ಅದರಲ್ಲಿಯೂ ಮುಖ್ಯವಾಗಿ ತರಕಾರಿಗಳು ಮತ್ತು ಎಣ್ಣೆಕಾಳುಗಳ ಬೆಲೆ ಇಳಿಕೆ ಆಗಿರುವುದರಿಂದ ಸಗಟು ಹಣದುಬ್ಬರ ಪ್ರಮಾಣ ತಗ್ಗಿದೆ.

ಸಗಟು ದರ ಸೂಚ್ಯಂಕ (ಡಬ್ಲ್ಯುಪಿಐ) ಆಧರಿಸಿದ ಹಣದುಬ್ಬರ 2022ರ ನವೆಂಬರ್‌ನಲ್ಲಿ ಶೇ 5.85ರಷ್ಟು ಇತ್ತು. 2021ರ ಡಿಸೆಂಬರ್‌
ನಲ್ಲಿ ಶೇ 14.27ರಷ್ಟು ಆಗಿತ್ತು.

ಗೋಧಿ, ಬೇಳೆಕಾಳು ಮತ್ತು ಆಲೂಗಡ್ಡೆ, ಹಾಲು, ಮಾಂಸ ಮತ್ತು ಮೀನು ದುಬಾರಿಯಾಗಿಯೇ ಇವೆ.

ಆಹಾರ ವಸ್ತುಗಳು, ಕಚ್ಚಾ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಜವಳಿ, ರಾಸಾಯನಿಕ ಮತ್ತು ರಾಸಾಯನಿಕ ಉತ್ಪನ್ನಗಳ ಬೆಲೆ ಇಳಿಕೆ ಆಗಿರುವುದರಿಂದ ಸಗಟು ಹಣದುಬ್ಬರ ಪ್ರಮಾಣ ಕಡಿಮೆ ಆಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ಚಿಲ್ಲರೆ ಮತ್ತು ಸಗಟು ಹಣದುಬ್ಬರಗಳೆರಡೂ ಇಳಿಕೆ ಕಂಡಿವೆ. ಹೀಗಾಗಿ ಫೆಬ್ರುವರಿಯಲ್ಲಿ ನಡೆಯಲಿರುವ ಹಣಕಾಸು ನೀತಿ ಸಭೆಯಲ್ಲಿ ಆರ್‌ಬಿಐ ಶೇ 0.25ರಷ್ಟು ಬಡ್ಡಿದರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಆ ಬಳಿಕ ಬಡ್ಡಿದರ ಏರಿಕೆಗೆ ವಿರಾಮ ನೀಡುವ ನಿರೀಕ್ಷೆ ಇದೆ’ ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT