ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಗಟು ಹಣದುಬ್ಬರ ಶೇ 0.58ಕ್ಕೆ ಏರಿಕೆ

Last Updated 16 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ನವದೆಹಲಿ: ಆಹಾರ ಪದಾರ್ಥಗಳ ಬೆಲೆಯಲ್ಲಿನ ಹೆಚ್ಚಳದಿಂದಾಗಿಸಗಟು ಹಣದುಬ್ಬರವು ನವೆಂಬರ್‌ನಲ್ಲಿ ಶೇ 0.58ಕ್ಕೆ ಏರಿಕೆಯಾಗಿದೆ.

ಸಗಟು ದರ ಸೂಚ್ಯಂಕ (ಡಬ್ಲ್ಯುಪಿಐ) ಆಧರಿಸಿದ ಹಣದುಬ್ಬರುವ‌‌ಅಕ್ಟೋಬರ್‌ನಲ್ಲಿ ಶೇ 0.16ರಷ್ಟಿತ್ತು. 2018ರ ನವೆಂಬರ್‌ನಲ್ಲಿ ಶೇ 4.47ರಷ್ಟಿತ್ತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಈ ಮಾಹಿತಿ ನೀಡಿದೆ.

ಆಹಾರ ಪದಾರ್ಥಗಳ ಹಣದುಬ್ಬರ ಶೇ 9.80 ರಿಂದ ಶೇ 11ಕ್ಕೆ ಏರಿಕೆಯಾಗಿದೆ. ಅದರಲ್ಲಿಯೂ ಮುಖ್ಯವಾಗಿ ಈರುಳ್ಳಿ ಶೇ 172ಕ್ಕೂ ಅಧಿಕ ಏರಿಕೆ ಕಂಡಿದೆ.

ಕೆಲವು ಮಾರುಕಟ್ಟೆಗಳಲ್ಲಿ ಈರುಳ್ಳಿ ಧಾರಣೆ ಕೆ.ಜಿಗೆ ₹ 150 ರಿಂದ ₹ 200ರಂತೆ ಮಾರಾಟವಾಗಿತ್ತು. ಸದ್ಯ ಕೆ.ಜಿಗೆ ₹ 100ರ ಆಸುಪಾಸಿನಲ್ಲಿದೆ. ಆಮದು ಮತ್ತು ಹೊಸ ಬೆಳೆ ಮಾರುಕಟ್ಟೆಗೆ ಬರಲಿದ್ದು, ಇದರಿಂದ ಬೆಲೆಯಲ್ಲಿ ಇನ್ನಷ್ಟು ಇಳಿಕೆ ಆಗಲಿದೆ ಎಂದು ಸರ್ಕಾರ ತಿಳಿಸಿದೆ.

ಆಹಾರೇತರ ಉತ್ಪನ್ನಗಳ ಬೆಲೆ ಶೇ 2.35 ರಿಂದ ಶೇ 1.93ಕ್ಕೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT