ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆಬ್ರುವರಿಯಲ್ಲಿ ಸಗಟು ಹಣದುಬ್ಬರ ಶೇ 13.11ಕ್ಕೆ ಏರಿಕೆ

Last Updated 14 ಮಾರ್ಚ್ 2022, 11:14 IST
ಅಕ್ಷರ ಗಾತ್ರ

ನವದೆಹಲಿ: ಕಚ್ಚಾ ತೈಲ ದರ ಏರಿಕೆ ಮತ್ತು ಆಹಾರೇತರ ವಸ್ತುಗಳ ಬೆಲೆ ಹೆಚ್ಚಳದಿಂದಾಗಿ ಸಗಟು ಹಣದುಬ್ಬರ ದರವು ಫೆಬ್ರುವರಿಯಲ್ಲಿ ಶೇಕಡ 13.11ಕ್ಕೆ ಏರಿಕೆ ಕಂಡಿದೆ.

ಜನವರಿಯಲ್ಲಿ ಇದು ಶೇ 12.96ರಷ್ಟು ಇತ್ತು. ಕಳೆದ ವರ್ಷದ ಫೆಬ್ರುವರಿಯಲ್ಲಿ ಶೇ 4.83ರಷ್ಟು ಇತ್ತು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಾಹಿತಿ ನೀಡಿದೆ. 2021ರ ಏಪ್ರಿಲ್‌ನಿಂದ‌ ಈಚೆಗೆ ಸಗಟು ಹಣದುಬ್ಬರ ದರವು ಸತತ 11ನೇ ತಿಂಗಳಿನಲ್ಲಿಯೂ ಎರಡಂಕಿ ಮಟ್ಟದಲ್ಲಿಯೇ ಇದೆ.

ಆಹಾರ ವಸ್ತುಗಳ ಹಣದುಬ್ಬರ ಪ್ರಮಾಣವು ಜನವರಿಯಲ್ಲಿ ಶೇ 10.33ರಷ್ಟು ಇದ್ದಿದ್ದು ಫೆಬ್ರುವರಿಯಲ್ಲಿ ಶೇ 8.19ಕ್ಕೆ ಇಳಿಕೆ ಆಗಿದೆ. ತರಕಾರಿಗಳ ಹಣದುಬ್ಬರವು ಶೇ 38.45ರಿಂದ ಶೇ 26.93ಕ್ಕೆ ಇಳಿಕೆ ಆಗಿದೆ.

ಜನವರಿಗೆ ಹೋಲಿಸಿದರೆ ಫೆಬ್ರುವರಿಯಲ್ಲಿ ಲೋಹ, ರಾಸಾಯನಿಕ ಮತ್ತು ರಾಸಾಯನಿಕ ಉತ್ಪನ್ನಗಳು, ಕಚ್ಚಾ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಆಹಾರ ವಸ್ತುಗಳ ಮತ್ತು ಆಹಾರೇತರ ವಸ್ತುಗಳ ಬೆಲೆಯಲ್ಲಿ ಏರಿಕೆ ಆಗಿದೆ. ಹೀಗಾಗಿ ಸಗಟು ಹಣದುಬ್ಬರವು ಗರಿಷ್ಠ ಮಟ್ಟದಲ್ಲಿದೆ ಎಂದು ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ತಯಾರಿಕಾ ವಸ್ತುಗಳ ಹಣದುಬ್ಬರವು ಶೇ 9.42ರಿಂದ ಶೇ 9.84ಕ್ಕೆ ಏರಿಕೆ ಆಗಿದೆ. ಇಂಧನ ಮತ್ತು ವಿದ್ಯುತ್‌ ಬೆಲೆ ಏರಿಕೆಯು ಶೇ 31.50ರ ಮಟ್ಟದಲ್ಲಿ ಇದೆ. ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ದರ ಏರಿಕೆಯಿಂದಾಗಿ ಕಚ್ಚಾ ಪೆಟ್ರೋಲಿಯಂ ಹಣದುಬ್ಬರವು ಶೇ 39.41ರಿಂದ ಶೇ 55.17ಕ್ಕೆ ಏರಿಕೆ ಆಗಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT