ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ 

Last Updated 15 ಜೂನ್ 2020, 2:58 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳು ಸೋಮವಾರವೂ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿವೆ. ಕೊರೊನಾವೈರಸ್ ಲಾಕ್‌ಡೌನ್‌ ಆಗಿ 82 ದಿನಗಳಾಗಿದ್ದು, ಸತತ 9ನೇ ದಿನ ಇಂಧನ ದರ ಏರಿಕೆ ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್‌ಗೆ 0.50 ಪೈಸೆ ಮತ್ತು ಡೀಸೆಲ್‌ಗೆ 0.56 ಪೈಸೆ ಹೆಚ್ಚಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ 0.48ಪೈಸೆ ಏರಿಕೆ ಆಗಿದ್ದು ಲೀಟರ್ ಪೆಟ್ರೋಲ್ ಬೆಲೆ ₹76.26 ಆಗಿದೆ. ಅದೇ ವೇಳೆ0.59 ಪೈಸೆ ಏರಿಕೆ ಆಗಿ ಡೀಸೆಲ್/ಲೀಟರ್ ದರ ₹74.62 ಆಗಿದೆ.

ಭಾನುವಾರ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್‌ ದರ 0.62 ಪೈಸೆ ಮತ್ತು ಡೀಸೆಲ್ ದರ 0.64 ಪೈಸೆ ಏರಿಕೆ ಆಗಿತ್ತು.

ದೇಶದಾದ್ಯಂತ ಇಂಧನ ಬೆಲೆ ಏರಿಕೆ ಆಗಿದ್ದು, ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್‌ಗೆ ಅನುಗುಣವಾಗಿ ವಿವಿಧ ರಾಜ್ಯಗಳಲ್ಲಿ ಇಂಧನ ದರ ವ್ಯತ್ಯಾಸವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT