ಶನಿವಾರ, ಜುಲೈ 2, 2022
26 °C

ಯೆಸ್‌ ಬ್ಯಾಂಕ್ ಲಾಭ ₹ 367 ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಯೆಸ್‌ ಬ್ಯಾಂಕ್‌ 2021–22ನೇ ಹಣಕಾಸು ವರ್ಷದಲ್ಲಿ ₹ 367 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ ₹ 3,788 ಕೋಟಿಗಳಷ್ಟು ನಷ್ಟ ಅನುಭವಿಸಿತ್ತು.

ವರಮಾನವು ₹ 4,678 ಕೋಟಿಗಳಿಂದ ₹ 5,829 ಕೋಟಿಗಳಿಗೆ ಏರಿಕೆ ಆಗಿದೆ ಎಂದು ಷೇರುಪೇಟೆಗೆ ಬ್ಯಾಂಕ್‌ ತಿಳಿಸಿದೆ.

2021–22ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್‌ ₹ 1,066 ಕೋಟಿ ನಿವ್ವಳ ಲಾಭ ಗಳಿಸಿದೆ. 2020–21ನೇ ಹಣಕಾಸು ವರ್ಷದಲ್ಲಿ ₹ 3,462 ಕೋಟಿಗಳಷ್ಟು ನಷ್ಟ ಅನುಭವಿಸಿತ್ತು. ವರಮಾನವು ₹ 23,053 ಕೋಟಿಗಳಿಂದ ₹ 22,285 ಕೋಟಿಗಳಿಗೆ ಇಳಿಕೆ ಆಗಿದೆ.

ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಎನ್‌ಪಿಎ) ಶೇ 15.4 ರಿಂದ ಶೇ 13.9ಕ್ಕೆ ಇಳಿಕೆ ಕಂಡಿದೆ. ನಿವ್ವಳ ಎನ್‌ಪಿಎ ಶೇ 5.9 ರಿಂದ ಶೇ 4.5ಕ್ಕೆ ಇಳಿಕೆ ಆಗಿದೆ.

ಕಳೆದ ಎರಡು ವರ್ಷಗಳಲ್ಲಿ ಬ್ಯಾಂಕ್‌ನ ಹಣಕಾಸು ಸ್ಥಿತಿ ಉತ್ತಮವಾಗಿದೆ ಎನ್ನುವುದನ್ನು ಈ ಫಲಿತಾಂಶವು ಸೂಚಿಸುತ್ತಿದೆ ಎಂದು ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು