ಬುಧವಾರ, ಮೇ 27, 2020
27 °C

ಬಂಡವಾಳ ಸಂಗ್ರಹ ಯೆಸ್‌ ಬ್ಯಾಂಕ್‌ ಮಂಡಳಿ ಒಪ್ಪಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಷೇರು ಮಾರಾಟ ಮಾಡುವ ಮೂಲಕ ₹ 5 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಯೆಸ್‌ ಬ್ಯಾಂಕ್‌ನ ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ.

ಅರ್ಹ ಸಾಂಸ್ಥಿಕ ವಿತರಣೆ/ಸಾರ್ವಜನಿಕ ವಿತರಣೆ,  ವಿದೇಶಿ ಕರೆನ್ಸಿಗೆ ಪರಿವರ್ತಿಸಬಹುದಾದ ಬಾಂಡ್‌ಗಳು ಅಥವಾ ಇನ್ಯಾವುದೇ ರೀತಿಯಲ್ಲಿ ಎರಡು ಅಥವಾ ಅದಕ್ಕಿಂತಲೂ ಹೆಚ್ಚಿನ ಕಂತುಗಳಲ್ಲಿ ಬಂಡವಾಳ ಸಂಗ್ರಹಿಸಬಹುದಾಗಿದೆ.

ಫೆಬ್ರುವರಿ 7ರಂದು ನಡೆದಿದ್ದ ಆಡಳಿತ ಮಂಡಳಿ ಸಭೆಯಲ್ಲಿ ₹ 10 ಸಾವಿರ ಕೋಟಿಗೂ ಅಧಿಕ ಮೊತ್ತದ ಬಂಡವಾಳ ಸಂಗ್ರಹಿಸಲು ಅನುಮತಿ ನೀಡಲಾಗಿತ್ತು. ಇದೀಗ ಗುರುವಾರ ನಡೆದ ಸಭೆಯಲ್ಲಿ ಹೆಚ್ಚುವರಿಯಾಗಿ ₹ 5 ಸಾವಿರ ಕೋಟಿ ಸಂಗ್ರಹಿಸಲು ಒಪ್ಪಿಗೆ ದೊರೆತಿದೆ. ಆದರೆ, ಒಟ್ಟಾರೆ ಮೊತ್ತ ₹ 15 ಸಾವಿರ ಕೋಟಿಯನ್ನು ಮೀರುವಂತಿಲ್ಲ.

ಹೊಸ ಆಡಳಿತ ಮಂಡಳಿಯ ಸಿಇಒ ಆಗಿ ಪ್ರಶಾಂತ್‌ ಕುಮಾರ್‌ ಅವರು ಮೂರು ವರ್ಷಗಳ ಅವಧಿಗೆ ನೇಮಕವಾಗಿದ್ದಾರೆ. 2020ರ ಮಾರ್ಚ್‌ 26ರಿಂದ ಜಾರಿಗೆ ಬರುವಂತೆ ಬ್ಯಾಂಕ್‌ ಪುನರ್‌ರಚನೆ ಆಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಐಸಿಐಸಿಐ ಬ್ಯಾಂಕ್‌, ಕೋಟಕ್‌ ಮಹೀಂದ್ರಾ ಬ್ಯಾಂಕ್‌,ಬಂಧನ್‌ ಬ್ಯಾಂಕ್‌, ಎಚ್‌ಡಿಎಫ್‌ಸಿ ಸೇರಿ ಹಲವು ಕಂಪನಿಗಳು ಹೂಡಿಕೆ ಮಾಡಲಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು