ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀ ಮೀಡಿಯಾ ಸಿಇಒ ಅಭಯ್‌ ಓಜಾ ವಜಾ

Published 6 ಮೇ 2024, 12:37 IST
Last Updated 6 ಮೇ 2024, 12:37 IST
ಅಕ್ಷರ ಗಾತ್ರ

ನವದೆಹಲಿ: ಜೀ ಮೀಡಿಯಾ ಕಾರ್ಪೊರೇಷನ್‌ ಲಿಮಿಟೆಡ್‌ ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಭಯ್‌ ಓಜಾ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ.

ಸೋಮವಾರ ನಡೆದ ನಿರ್ದೇಶಕ ಮಂಡಳಿಯ ಸಭೆಯಲ್ಲಿ ಓಜಾ ಅವರನ್ನು ಕೆಲಸದಿಂದ ವಜಾಗೊಳಿಸುವುದಕ್ಕೆ ಅನುಮೋದನೆ ನೀಡಿದ್ದು, ಮೇ 4ರಿಂದ ಇದು ಜಾರಿಯಾಗಿದೆ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.

ಆದರೆ, ಓಜಾ ಅವರನ್ನು ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕಂಪನಿ ಕಾರಣ ತಿಳಿಸಿಲ್ಲ. 2022ರಲ್ಲಿ ಜೀ ಮೀಡಿಯಾಗೆ ಸೇರಿದ್ದ ಓಜಾ, ಕಳೆದ ವರ್ಷ ಸಿಇಒ ಆಗಿ ಬಡ್ತಿ ಪಡೆದಿದ್ದರು. 

ಜೀ ಮೀಡಿಯಾದ ಕಾನೂನು ವಿಭಾಗದ ಮುಖ್ಯ ವ್ಯವಸ್ಥಾಪಕರಾಗಿದ್ದ ಪೀಯೂಷ್ ಚೌಧರಿ ಏಪ್ರಿಲ್‌ನಲ್ಲಿ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT