ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಗ್ಗಿದ ಜೊಮ್ಯಾಟೊ ನಷ್ಟ

Last Updated 10 ಫೆಬ್ರುವರಿ 2022, 16:00 IST
ಅಕ್ಷರ ಗಾತ್ರ

ನವದೆಹಲಿ: ಆಹಾರ ವಸ್ತುಗಳನ್ನು ಮನೆಬಾಗಿಲಿಗೆ ತಲುಪಿಸುವ ಜೊಮ್ಯಾಟೊ ಕಂಪನಿಯ ನಷ್ಟವು ಪ್ರಸಕ್ತ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ₹ 67.2 ಕೋಟಿಗೆ ಇಳಿಕೆ ಆಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿಯ ನಷ್ಟವು ₹ 352.6 ಕೋಟಿ ಇತ್ತು.

ವರಮಾನದಲ್ಲಿ ಉತ್ತಮ ಬೆಳವಣಿಗೆ ಕಂಡಿರುವುದರಿಂದ ನಷ್ಟದ ಪ್ರಮಾಣ ಕಡಿಮೆ ಆಗಿದೆ ಎಂದು ಕಂಪನಿಯು ಹೇಳಿಕೊಂಡಿದೆ. ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ಕಾರ್ಯಾಚರಣಾ ವರಮಾನವು ₹ 609.4 ಕೋಟಿಯಿಂದ ₹ 1,112 ಕೋಟಿಗೆ ಏರಿಕೆ ಆಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ ಒಟ್ಟಾರೆ ವೆಚ್ಚವು ₹ 755.7 ಕೋಟಿಯಿಂದ ₹ 1,642.6 ಕೋಟಿಗೆ ಏರಿಕೆ ಕಂಡಿದೆ ಎಂದು ಹೇಳಿದೆ. ವಹಿವಾಟಿನಲ್ಲಿ ದೀರ್ಘಾವಧಿಯ ಬೆಳವಣಿಗೆಯ ಸಾಮರ್ಥ್ಯಗಳ ಬಗ್ಗೆ ಗಮನ ಹರಿಸಲಾಗಿದೆ ಎಂದು ಕಂಪನಿಯ ಸ್ಥಾಪಕ ದೀಪೇಂದರ್‌ ಗೋಯಲ್‌ ಅವರು ಹೇಳಿದ್ದಾರೆ.

ಕಂಪನಿಯ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಕಂಪನಿಯ ಬಳಿ ಸದ್ಯ ₹ 12,739 ಕೋಟಿ ನಗದು ಇದ್ದು, ಹೆಚ್ಚಿನ ಬಂಡವಾಳ ಸಂಗ್ರಹಿಸುವ ಯಾವುದೇ ಆಲೋಚನೆ ಸದ್ಯಕ್ಕೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT