ಆಸಿಯಾನ್‌ ಸಮಾವೇಶಕ್ಕೆ ಮೋದಿ

7

ಆಸಿಯಾನ್‌ ಸಮಾವೇಶಕ್ಕೆ ಮೋದಿ

Published:
Updated:
Prajavani

ನವದೆಹಲಿ: ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘವು (ಎಫ್‌ಕೆಸಿಸಿಐ) ಫೆಬ್ರುವರಿ 25ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಆಯೋಜಿಸಿರುವ ಆಸಿಯಾನ್‌ ರಾಷ್ಟ್ರಗಳ ವಾಣಿಜ್ಯೋದ್ಯಮ ಒಕ್ಕೂಟಗಳ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ನೇತೃತ್ವದಲ್ಲಿ ಸಂಘದ ನಿಯೋಗ ಮಂಗಳವಾರ ಸಂಸತ್‌ನಲ್ಲಿ  ಭೇಟಿ ಮಾಡಿ ನೀಡಿದ ಆಹ್ವಾನಕ್ಕೆ ಪ್ರಧಾನಿ ಸಮ್ಮತಿ ಸೂಚಿಸಿದ್ದಾರೆ.

ಭಾರತ ಮತ್ತು ಆಸಿಯಾನ್‌ ರಾಷ್ಟ್ರಗಳ ನಡುವಣ ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗುವ ಈ ಸಮಾವೇಶವು, ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಯ ಅವಕಾಶಗಳನ್ನು ಹೆಚ್ಚಿಸಲು ನೆರವಾಗಲಿದೆ ಎಂದು ಪ್ರಧಾನಿಗೆ ತಿಳಿಸಲಾಯಿತು ಎಂದು ಸಂಘದ ಅಧ್ಯಕ್ಷ ಸುಧಾಕರ ಎಸ್‌. ಶೆಟ್ಟಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !