ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಲಾನ್‌ ಮಸ್ಕ್‌ ಭಾರತ ಭೇಟಿ ಮುಂದಕ್ಕೆ

Published 20 ಏಪ್ರಿಲ್ 2024, 5:42 IST
Last Updated 20 ಏಪ್ರಿಲ್ 2024, 5:42 IST
ಅಕ್ಷರ ಗಾತ್ರ

ನವದೆಹಲಿ: ಕಂಪನಿಯ ಜವಾಬ್ದಾರಿಗಳನ್ನು ನಿಭಾಯಿಸಬೇಕಾಗಿರುವುದರಿಂದ ಭಾರತದ ಭೇಟಿ ಮುಂದೂಡಿರುವುದಾಗಿ ಅಮೆರಿಕದ ಎಲೆಕ್ಟ್ರಿಕ್‌ ಕಾರು ತಯಾರಿಕಾ ಕಂಪನಿ ಟೆಸ್ಲಾದ ಸಿಇಒ ಇಲಾನ್‌ ಮಸ್ಕ್‌ ಶನಿವಾರ ತಿಳಿಸಿದ್ದಾರೆ.

ಏಪ್ರಿಲ್‌ 21 ಮತ್ತು 22ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಅಲ್ಲದೇ ಭಾರತದಲ್ಲಿ ಟೆಸ್ಲಾ ಕಂಪನಿಯ ಘಟಕದ ಸ್ಥಾಪನೆ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿತ್ತು. 

ಭೇಟಿ ವಿಳಂಬದ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಮಸ್ಕ್‌, ಕಂಪನಿಯ ಕೆಲಸದಲ್ಲಿ ನಿರತರಾಗಿರುವುದರಿಂದ ಭಾರತಕ್ಕೆ ಭೇಟಿ ನೀಡಲಾಗುತ್ತಿಲ್ಲ. ಆದರೆ ಇದೇ ವರ್ಷ ಭಾರತಕ್ಕೆ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷದ ಜೂನ್‌ನಲ್ಲಿ ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಮಸ್ಕ್‌ ಅವರನ್ನು ಭೇಟಿ ಮಾಡಿದ್ದರು. 2024ರಲ್ಲಿ ಭಾರತಕ್ಕೆ ಭೇಟಿ ನೀಡುವುದಾಗಿ ಮಾತುಕತೆ ವೇಳೆ ಮಸ್ಕ್‌ ಪ್ರಕಟಿಸಿದ್ದರು.‌

ಕೇಂದ್ರವು ಇತ್ತೀಚೆಗೆ ಹೊಸ ಎಲೆಕ್ಟ್ರಿಕ್‌  ವಾಹನ ನೀತಿಗೆ ಅನುಮೋದನೆ ನೀಡಿದೆ. ದೇಶದಲ್ಲಿ ಕನಿಷ್ಠ ₹4,168 ಕೋಟಿ ಬಂಡವಾಳ ಹೂಡಿಕೆ ಮಾಡಿ ಇ.ವಿ ತಯಾರಿಕಾ ಘಟಕ ಸ್ಥಾಪಿಸುವ ಕಂಪನಿಗಳಿಗೆ ಆಮದು ಸುಂಕದಲ್ಲಿ ರಿಯಾಯಿತಿ ಘೋಷಿಸಿದೆ. ಭಾರತದ ಮಾರುಕಟ್ಟೆ ಪ್ರವೇಶಿಸಲು ಮುಂದಾಗಿರುವ ಟೆಸ್ಲಾಗೆ ಇದು  ವರದಾನವಾಗಲಿದೆ ಎಂದು ಹೇಳಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT