ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗಿಗಳ ಭವಿಷ್ಯ ನಿಧಿ ಬಡ್ಡಿ ದರ ಶೇ 0.10ರಷ್ಟು ಹೆಚ್ಚಳ

Last Updated 21 ಫೆಬ್ರುವರಿ 2019, 13:33 IST
ಅಕ್ಷರ ಗಾತ್ರ

ನವದೆಹಲಿ: ಪಿಂಚಣಿ ನಿಧಿ ಸಂಸ್ಥೆಯಾಗಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್‌ಒ) ಪ್ರಸಕ್ತ ಹಣಕಾಸು ವರ್ಷದ (2018–19) ಬಡ್ಡಿ ದರವನ್ನು ಶೇ 0.10ರಷ್ಟು ಹೆಚ್ಚಿಸಲು ನಿರ್ಧರಿಸಿದೆ.

2017–18ನೆ ವರ್ಷಕ್ಕೆ ನೀಡಲಾಗುತ್ತಿದ್ದ ಶೇ 8.55 ಬಡ್ಡಿ ದರವು ಶೇ 8.65ರಷ್ಟಾಗಲಿದೆ. ಇದರಿಂದ ಭವಿಷ್ಯ ನಿಧಿಯ 6 ಕೋಟಿ ಸದಸ್ಯರಿಗೆ ಪ್ರಯೋಜನ ಲಭಿಸಲಿದೆ.

ಭವಿಷ್ಯ ನಿಧಿ ಸಂಘಟನೆಯ ಕೇಂದ್ರೀಯ ಮಂಡಳಿಯ ಎಲ್ಲ ಸದಸ್ಯರು ಬಡ್ಡಿ ದರ ಹೆಚ್ಚಿಸುವ ನಿರ್ಧಾರಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಬಡ್ಡಿ ದರ ಹೆಚ್ಚಿಸುವ ಈ ಪ್ರಸ್ತಾವವನ್ನು ಅನುಮೋದನೆಗಾಗಿ ಹಣಕಾಸು ಸಚಿವಾಲಯಕ್ಕೆ ಕಳಿಸಲಾಗುವುದು ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್‌ ಗಂಗ್ವಾರ್‌ ಹೇಳಿದ್ದಾರೆ.

ಭವಿಷ್ಯ ನಿಧಿ ಬಡ್ಡಿ ದರ ವಿವರ
ವರ್ಷ ಬಡ್ಡಿ ದರ (%)
2017-18 8.55
2016–17 8.65
2015–16 8.80
2014–15 8.75
2013–14 8.75
2012–13 8.50

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT