ಸೋಮವಾರ, ಮಾರ್ಚ್ 1, 2021
27 °C

ರೈತರ ಪ್ರತಿಭಟನೆಯಿಂದ ₹50,000 ಕೋಟಿ ನಷ್ಟ

ಪಿಟಿಐ Updated:

ಅಕ್ಷರ ಗಾತ್ರ : | |

ದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿದ್ದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಅಥವಾ ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಿಂದಾಗಿ ₹50,000 ಕೋಟಿ ನಷ್ಟವಾಗಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ತಿಳಿಸಿದೆ.

ಕೃಷಿ ಕಾನೂನುಗಳ ಜಾರಿಯನ್ನು ಒಂದೂವರೆ ವರ್ಷಗಳ ಕಾಲ ಅಮಾನತಿನಲ್ಲಿಡುವ, ಕೃಷಿಕರನ್ನೂ ಒಳಗೊಂಡಂತೆ ಸಮಿತಿಯನ್ನು ರಚಿಸುವ ಕೇಂದ್ರ ಸರ್ಕಾರದ ಹೊಸ ಪ್ರಸ್ತಾವವು ಸೂಕ್ತ ಹಾಗೂ ನ್ಯಾಯಸಮ್ಮತವೆನಿಸುತ್ತಿದೆ. ಇದು ಸಮಸ್ಯೆಯನ್ನು ಬಗೆಹರಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸುತ್ತಿದೆ ಎಂದು ಸಿಎಐಟಿನ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಖಂಡೇನ್‌ವಾಲಾ ಅಭಿಪ್ರಾಯಪಟ್ಟಿದ್ದಾರೆ.

'ಕೃಷಿಕ ಸಮುದಾಯ ಮತ್ತು ಕೃಷಿ ಉತ್ಪನ್ನ ವ್ಯವಹಾರದಲ್ಲಿ ತೊಡಗಿರುವವರ ಹಿತದೃಷ್ಟಿಯಿಂದ ಸರ್ಕಾರದ ಈ ಪ್ರಸ್ತಾವವನ್ನು ರೈತರು ಒಪ್ಪುವುದು ಒಳ್ಳೆಯದು. ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವುದು ಸೂಕ್ತ,' ಎಂದು ಖಂಡೇನ್‌ವಾಲಾ ಹೇಳಿದ್ದಾರೆ.

'ರೈತರು ಸರ್ಕಾರದ ಪ್ರಸ್ತಾವನೆಯನ್ನು ಒಪ್ಪದೇ ಹೋದರೆ, ಅವರು ಪರಿಹಾರದ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ನಿರ್ಣಯಿಸಲಾಗುತ್ತದೆ. ಆದರೆ, ಕೆಲವು ವಿಭಜಕ ಶಕ್ತಿಗಳು ಸಮಸ್ಯೆಗಳನ್ನು ಸೃಷ್ಟಿಸಲು ಸಿದ್ಧರಿರುತ್ತವೆ,' ಎಂದು ಅವರು ಹೇಳಿದರು.

ಉದ್ದೇಶಿತ ಜಂಟಿ ಸಮಿತಿಯಲ್ಲಿ ವ್ಯಾಪಾರಿಗಳಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಖಂಡೇನ್‌ವಾಲಾ ಸರ್ಕಾರಕ್ಕೆ ಮನವಿ ಮಾಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು