ಸೋಮವಾರ, ಮೇ 23, 2022
30 °C

2021-22ರಲ್ಲಿ ₹12 ಲಕ್ಷ ಕೋಟಿ ಸಾಲ: ಕೇಂದ್ರ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಕೇಂದ್ರ ಸರ್ಕಾರವು 2021-22ರಲ್ಲಿ ಸುಮಾರು ₹12 ಲಕ್ಷ ಕೋಟಿ ಸಾಲ ಪಡೆಯಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ.

2021-22ರ ಕೇಂದ್ರ ಬಜೆಟ್ ಅನ್ನು ಮಂಡಿಸಿದ ಅವರು, ಮುಂದಿನ ಹಣಕಾಸು ವರ್ಷದ ವೆಚ್ಚ ₹34.83 ಲಕ್ಷ ಕೋಟಿ ಆಗಿರಲಿದೆ. ಇದರಲ್ಲಿ ₹5.54 ಲಕ್ಷ ಕೋಟಿ ಬಂಡಳವಾಳ ವೆಚ್ಚವಾಗಿರಲಿದೆ ಎಂದು ಹೇಳಿದರು.

15ನೇ ಹಣಕಾಸು ಆಯೋಗದ ಶಿಫಾರಸುಗಳ ಪ್ರಕಾರ ರಾಜ್ಯಗಳು ಶೇ. 41ರಷ್ಟು ತೆರಿಗೆ ಪಾಲು ಹೊಂದಿವೆ. ಇದನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ಹೇಳಿದರು.

ಮೂಲ ಸೌಕರ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಆಕರ್ಷಿಸಲು ನಿಯಮಗಳನ್ನು ಸರಳಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿರುವುದಾಗಿಯೂ ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು