ಭಾನುವಾರ, ಮೇ 31, 2020
27 °C

ಆರೋಗ್ಯ, ವಾಹನ ವಿಮಾ ಕಂತು ಪಾವತಿಗೆ ವಿನಾಯ್ತಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೋವಿಡ್-19 ತಡೆಯಲೆಂದು ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿರುವುದರಿಂದ ಆರೋಗ್ಯ ಮತ್ತು ಮೋಟಾರ್‌ (ಥರ್ಡ್‌ ಪಾರ್ಟಿ) ವಿಮಾ ಪಾಲಿಸಿ ಕಂತು ಪಾವತಿಗೆ ಮೇ 15ರವರೆಗೆ ವಿನಾಯ್ತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಮಾರ್ಚ್ 25ರಿಂದ ಮೇ 3ರ ನಡುವೆ ಕಂತು ಪಾವತಿಸಬೇಕಿದ್ದ ಪಾಲಿಸಿಗೆ ಈ ವಿನಾಯ್ತಿ ಅನ್ವಯವಾಗುತ್ತದೆ. ಕಂತು ವಿನಾಯ್ತಿ ಅವಧಿಯಲ್ಲಿಯೂ ವಿಮಾ ಕಂಪನಿಗಳು ಕ್ಲೇಮ್‌ಗಳ ಪ್ರಕ್ರಿಯೆಯನ್ನು ಎಂದಿನಂತೆ ನಡೆಸಬೇಕು ಎಂದು ಅವರು ಸೂಚಿಸಿದ್ದಾರೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ.

ಗೃಹ ಸಾಲ ಸೇರಿದಂತೆ ವಿವಿಧ ಸಾಲಗಳ ಕಂತು ಪಾವತಿಗೆ ಈ ಹಿಂದೆಯೇ ಕೇಂದ್ರ ಹಣಕಾಸು ಸಚಿವಾಲಯ ಮೂರು ತಿಂಗಳ ವಿನಾಯ್ತಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು