ಬೆಳಗಾವಿ: ‘ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮಾಡಿದ ತಿದ್ದುಪಡಿಗಳ ಪ್ರಕಾರ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗಳು ಮತ್ತು ಇತರೆ ನಗರ ಸಹಕಾರಿ ಬ್ಯಾಂಕ್ಗಳಲ್ಲಿ 10 ವರ್ಷಗಳಿಗಿಂತ ಹೆಚ್ಚು ಅವಧಿ ಪೂರ್ಣಗೊಳಿಸಿದ ನಿರ್ದೇಶಕರನ್ನು ರಾಜ್ಯ ಸರ್ಕಾರ ಅನರ್ಹಗೊಳಿಸಬೇಕು’ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಒತ್ತಾಯಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘10 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಿರ್ದೇಶಕರನ್ನು ಅನರ್ಹಗೊಳಿಸುವ ಕುರಿತು ಆರ್ಬಿಐ ನಿಯಮಗಳಲ್ಲಿ ಮಾಡಿದ ತಿದ್ದುಪಡಿ ಮತ್ತು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಯ ಪ್ರತಿಯನ್ನು ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಂಬಂಧಿತ ಇಲಾಖೆಗಳ ಮುಖ್ಯಸ್ಥರಿಗೆ ಕಳುಹಿಸಿದ್ದೇನೆ’ ಎಂದರು.

‘ಈ ತಿದ್ದುಪಡಿಗಳ ನಂತರವೇ, ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಿತು. ನಿಬಂಧನೆಗಳ ಪ್ರಕಾರ ಏಳು ನಿರ್ದೇಶಕರಿಗೆ ಸ್ಪರ್ಧೆಗೆ ಅವಕಾಶ ನೀಡಬಾರದಿತ್ತು. ಒಂದುವೇಳೆ ತಿದ್ದುಪಡಿ ನಿಯಮ ಪರಿಶೀಲಿಸಿದ್ದರೆ, ಕಣದಲ್ಲಿದ್ದ ಅಭ್ಯರ್ಥಿಗಳು ಅನರ್ಹರಾಗುತ್ತಿದ್ದರು. ಸರ್ಕಾರ ತಿದ್ದುಪಡಿ ಜಾರಿಗೆ ತಂದರೆ, ಏಳು ನಿರ್ದೇಶಕರು ಅನರ್ಹರಾಗಬಹುದು’ ಎಂದು ಹೇಳಿದರು.

‘10 ವರ್ಷ ಅಧಿಕಾರವಧಿ ಪೂರೈಸಿದ ಡಿಸಿಸಿ ಬ್ಯಾಂಕ್ನ ನಿರ್ದೇಶಕರನ್ನು ಅನರ್ಹಗೊಳಿಸಲು ಸರ್ಕಾರ ಮತ್ತು ಹಿರಿಯ ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದು ಸರಿಯಲ್ಲ’ ಎಂದು ದೂರಿದರು.

‘ನಮ್ಮ ಬೇಡಿಕೆ ಈಡೇರದಿದ್ದರೆ ಕಾನೂನು ಹೋರಾಟಕ್ಕೆ ಇಳಿಯುತ್ತೇವೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಮತ್ತು ಇತರರಿಗೂ ಎಚ್ಚರಿಕೆ ನೀಡಲಾಗಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-21-456654401

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.