ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಪಿಐ: ₹ 9,103 ಕೋಟಿ ಹೊರಹರಿವು

Last Updated 12 ಏಪ್ರಿಲ್ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಏಪ್ರಿಲ್‌ 1 ರಿಂದ 9ರವರೆಗಿನ ಅವಧಿಯಲ್ಲಿ ದೇಶದ ಬಂಡವಾಳ ಮಾರುಕಟ್ಟೆಯಿಂದ ₹ 9,103 ಕೋಟಿ ಮೊತ್ತ ಹಿಂದಕ್ಕೆ ಪಡೆದಿದ್ದಾರೆ.

ಕೋವಿಡ್‌–19 ಸೃಷ್ಟಿಸಿರುವ ಬಿಕ್ಕಟ್ಟಿನಿಂದಾಗಿ ಹೂಡಿಕೆದಾರರು ಸುರಕ್ಷಿತ ಮಾರ್ಗಗಳಾದ ಚಿನ್ನ ಮತ್ತು ಡಾಲರ್‌ ಆಧಾರಿತ ಸಾಲಪತ್ರಗಳ ಮೇಲೆ ಬಂಡವಾಳ ತೊಡಗಿಸಲು ಆಸಕ್ತಿ ತೋರಿಸುತ್ತಿದ್ದಾರೆ. ಇದರಿಂದಾಗಿ ಷೇರುಪೇಟೆಯಿಂದ ಬಂಡವಾಳ ಹೊರಹರಿವು ಹೆಚ್ಚಾಗುತ್ತಿದೆ.

ಹೂಡಿಕೆದಾರರು ₹2,951 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹ 6,152 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ.

ಮಾರ್ಚ್‌ನಲ್ಲಿ ₹1.1 ಲಕ್ಷ ಕೋಟಿಗಳಷ್ಟು ದಾಖಲೆ ಮೊತ್ತವನ್ನು ಹಿಂದಕ್ಕೆ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT