ಹುಬ್ಬಳ್ಳಿ: ‘ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ದೀರ್ಘಕಾಲೀನ ಆರ್ಥಿಕ ಭದ್ರತಾ ಯೋಜನೆಯಾಗಿದೆ. ಪ್ರಸ್ತುತ ದಿನಗಳಲ್ಲಿ ಇದು ಪ್ರತಿಯೊಬ್ಬರಿಗೂ ಅಗತ್ಯ. ವಿಶೇಷವಾಗಿ ಉದ್ಯಮಿಗಳು ಮತ್ತು ಸ್ವಉದ್ಯೋಗಿಗಳಿಗೆ ನಿವೃತ್ತಿ ಜೀವನವನ್ನು ಸುರಕ್ಷಿತಗೊಳಿಸುವ ಅತ್ಯುತ್ತಮ ಸಾಧನವಾಗಿದೆ’ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಹೇಳಿದರು.

ಇಲ್ಲಿನ ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ವಿಷನ್ ಕರ್ನಾಟಕ ಫೌಂಡೇಷನ್, ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಕುರಿತು ವಿಶೇಷ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಎನ್ಪಿಎಸ್ ಯೋಜನೆಯ ಲಾಭ, ತೆರಿಗೆ ವಿನಾಯಿತಿ, ಹೂಡಿಕೆ, ಪಿಂಚಣಿ ಲೆಕ್ಕಾಚಾರ ಹಾಗೂ ಉದ್ಯಮ, ವ್ಯಾಪಾರ ವಲಯದಲ್ಲಿ ಉದ್ಯೋಗಿಗಳ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯಲ್ಲಿ ಎನ್ಪಿಎಸ್ ಮಹತ್ವದ ಕುರಿತು ತಜ್ಞರು ಉಪನ್ಯಾಸ ನೀಡಿದರು.

ಪಿಎಫ್ಆರ್ಡಿಎ ಸಹಾಯಕ ವ್ಯವಸ್ಥಾಪಕ ಶೈಲೆಂದರ್ ಬಾಬು ಅವರು, ಎನ್ಪಿಎಸ್ ಯೋಜನೆಯ ವೈಶಿಷ್ಟ್ಯ ಹಾಗೂ ಸರ್ಕಾರದಿಂದ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಸಂಸ್ಥೆಯ ಉಪಾಧ್ಯಕ್ಷ ಸಿದ್ದೇಶ್ವರ ಕಮ್ಮಾರ, ಗೌರವ ಕಾರ್ಯದರ್ಶಿ ಉದಯ ರೇವಣಕರ, ಸಾಗರ್ ಬಿ.ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-24-1012940350

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.