ಗುರುವಾರದ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಡಾಲರ್ ಎದುರು ₹ 73.82ರಷ್ಟಾಗಿತ್ತು. ದೇಶದ ಷೇರು ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯುತ್ತಿರುವುದು ಹಾಗೂ ಡಾಲರ್ ದುರ್ಬಲಗೊಂಡಿರುವುದು ಕೂಡ ರೂಪಾಯಿಯ ಮೌಲ್ಯ ಹೆಚ್ಚಾಗಿರುವುದಕ್ಕೆ ಕಾರಣ ಎನ್ನಲಾಗಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ಗುರುವಾರ ಒಟ್ಟು ₹ 1,164 ಕೋಟಿ ಮೌಲ್ಯದ ಷೇರುಗಳನ್ನು ಖರೀದಿ ಮಾಡಿದ್ದಾರೆ.