ಬಂಟ್ವಾಳ: ದೇಶದಲ್ಲಿ ಪ್ರತೀ ಮನೆಗೆ ಜೀವ ವಿಮೆ ತಲುಪಿಸುವ ಜವಾಬ್ದಾರಿ ಪ್ರತಿನಿಧಿಗಳಿಗೆ ಇದೆ. ಪ್ರಸಕ್ತ ಸನ್ನಿವೇಶಕ್ಕೆ ತಕ್ಕಂತೆ ಹೊಸ ಜೀವವಿಮೆ ಪಾಲಿಸಿ ಮತ್ತು ತಾಂತ್ರಿಕತೆ ಬಗ್ಗೆ ಸೂಕ್ತ ತರಬೇತಿ ಮತ್ತು ಮಾಹಿತಿ ಪಡೆಯುವ ಅಗತ್ಯವಿದೆ ಎಂದು ಎಲ್ಐಸಿ ಉಡುಪಿ ವಿಭಾಗದ ಮ್ಯಾನೇಜರ್ (ಮಾರಾಟ) ದುರ್ಗಾರಾಮ್ ಶೆಣೈ ಹೇಳಿದರು.

ಇಲ್ಲಿನ ಬಿ.ಸಿ.ರೋಡ್ ಲಯನ್ಸ್ ಸಭಾಂಗಣದಲ್ಲಿ ಭಾರತೀಯ ಜೀವ ವಿಮಾ ನಿಗಮ ಅಧಿಕಾರಿಗಳ ಸಂಘಟನೆ ವತಿಯಿಂದ ಏರ್ಪಡಿಸಿದ್ದ 'ವಿಜಯ ಪಥ' ವಿಮಾ ಪ್ರತಿನಿಧಿಗಳ ವಿಶೇಷ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಂಟ್ವಾಳ ಹಿರಿಯ ಶಾಖಾಧಿಕಾರಿ ಗುರುದತ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಅಧಿಕಾರಿಗಳ ಸಂಘಟನೆ ಅಧ್ಯಕ್ಷ ಟಿ.ಡಿ.ರಾಘವೇಂದ್ರ, ವಿಭಾಗ ಕಾರ್ಯದರ್ಶಿ ವಿಶ್ವೇಶ್ವರ ಎಂ.ಶೆಟ್ಟಿ ಮಾತನಾಡಿದರು.

ಇದೇ ವೇಳೆ ಸಂಪನ್ಮೂಲ ವ್ಯಕ್ತಿಗಳಾದ ವಸಂತ್ ಕುಮಾರ್ ಶೆಟ್ಟಿ, ಅಕ್ಷಿತ್ ಮತ್ತು ಅಕ್ಷಯ್ ಡಿಜಿಟಲೀಕರಣ ಬಗ್ಗೆ ಮಾಹಿತಿ ನೀಡಿದರು. ಸಂಘದ ಪದಾಧಿಕಾರಿಗಳಾದ ಮಧ್ವರಾಜ್ ಕಲ್ಮಾಡಿ, ಸತೀಶ್, ಹರೀಶ್ ಪೈ, ರಾಮಚಂದ್ರ ಮೊದಲಾದವರು ಭಾಗವಹಿಸಿದ್ದರು.

ಸಂಘದ ಕಾರ್ಯದರ್ಶಿ ನಾರಾಯಣ ಬಲ್ಯ ಸ್ವಾಗತಿಸಿ, ಉಪ ಶಾಖಾಧಿಕಾರಿ ಮುತ್ತಯ್ಯ ಮಾರಾಟೆ ಪ್ರಾಸ್ತಾವಿಕ ಮಾತನಾಡಿದರು. ದಿನೇಶ್ ಮಾಮೇಶ್ವರ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-29-1896683510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.