ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ

Last Updated 28 ಮೇ 2020, 13:55 IST
ಅಕ್ಷರ ಗಾತ್ರ

ಬೆಳಗಾವಿ: ನಗರ ಸ್ಥಳೀಯ ಸಂಸ್ಥೆಗಳು ವಿಧಿಸುವ ಆಸ್ತಿ ತೆರಿಗೆ ಮೇಲಿನ ಶೇ. 5ರ ರಿಯಾಯಿತಿ ಅವಧಿಯನ್ನು ಜುಲೈ 31ರವರೆಗೂ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಜಾರಿಗೆ ತಂದ ಲಾಕ್‌ಡೌನ್ ಪರಿಣಾಮ ಸಾರ್ವಜನಿಕರು ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಬಹಳಷ್ಟು ಜನರಿಗೆ ದುಡಿಮೆ ಇಲ್ಲದೆ ಗಳಿಕೆ ಇಲ್ಲವಾಗಿದೆ. ಹೀಗಾಗಿ, ರಿಯಾಯಿತಿ ಸಮೇತ ಪಾವತಿ ಅವಧಿಯನ್ನು ಮೇ 31ರವರೆಗೆ ನಿಗದಿ ಮಾಡಲಾಗಿತ್ತು. ಈಗ ಈ ಅವಧಿ ವಿಸ್ತರಿಸಲಾಗಿದೆ.

‘ಆಸ್ತಿ ತೆರಿಗೆ ಪಾವತಿ ಮೇಲಿನ ವಿಳಂಬ ದಂಡವನ್ನು ಜುಲೈ 1ರಿಂದ ಅನ್ವಯಿಸುವ ಬದಲಿಗೆ ನ. 1ರಿಂದ ಅನ್ವಯಿಸಿ ವಿಧಿಸಬೇಕು’ ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಜೆ. ರವಿಶಂಕರ್ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT