ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬುಧವಾರ ಪಾಲುದಾರರೊಂದಿಗೆ ಸಮಾಲೋಚನೆ ನಡೆಯಿತು.

ಜಿಲ್ಲಾ ಕೈಗಾರಿಕೆ ಕೇಂದ್ರ ಹಾಗೂ ಬೆಳಗಾವಿ ವಾಣಿಜ್ಯೋದ್ಯಮ ಸಂಘಗಳ ಸಹಯೋಗದಲ್ಲಿ ಫೌಂಡ್ರಿ ಕ್ಲಸ್ಟರ್ ಸಭಾಂಗಣದಲ್ಲಿ ನಡೆದ ವಿಭಾಗಮಟ್ಟದ ಸಮಾವೇಶದಲ್ಲಿ ವಿವಿಧ ತಜ್ಞರು ವಿಷಯಗಳನ್ನು ಮಂಡಿಸಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಸತೀಶ ಬಿ.ಸಿ. ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಕಡೆ ಪಾಲುದಾರರ ಸಮಾವೇಶ ನಡೆಸಿ, ಸಲಹೆ ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಚರ್ಚೆಯ ನಂತರ ನೂತನ ಪಾಲಿಸಿ ಜಾರಿಗೆ ತರಲಿದೆ ಎಂದರು.

ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳಿಂದ ಕೈಗಾರಿಕೊದ್ಯಮಿಗಳು ಆಗಮಿಸಿದ್ದರು. ಹುಬ್ಬಳ್ಳಿಯ ಎಂಎಸ್ಎಂಇ ಜೆ.ಡಿ. ಸತೀಶ್ ಕುಮಾರ, ಫೌಂಡ್ರಿ ಕ್ಲಸ್ಟರ್ ಚೇರಮನ್ ರಾಮ ಭಂಡಾರೆ, ಬೆಳಗಾವಿ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ, ಹುಬ್ಬಳ್ಳಿ ವಾಣಿಜ್ಯೋದ್ಯಮ ಸಂಘದ ಉಪಾಧ್ಯಕ್ಷ ಪ್ರವೀಣ ಅಗಡಿ, ವಿಜಯಪುರ ವಾಣಿ ಜ್ಯೋದ್ಯಮ ಸಂಘದ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್, ಲಘು ಉದ್ಯೋಗ ಭಾರತಿ ರಾಷ್ಟ್ರೀಯ ಉಪಾಧ್ಯಕ್ಷ ಸಚಿನ್ ಸಬ್ನಿಸ್, ಬೆಳಗಾವಿ ಕಾರ್ಯದರ್ಶಿ ಪ್ರಶಾಂತ ಪಾಟೀಲ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಸತ್ಯನಾರಾಯಣ ಭಟ್ ಮೊದಲಾದವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-21-647551932

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.