ಬೆಂಗಳೂರು: ಕರ್ನಾಟಕದ ನಾವೀನ್ಯತಾ ಪರಿಸರ ವ್ಯವಸ್ಥೆ ಯನ್ನು ಬಲಪಡಿಸುವ ಮತ್ತು ನವೋದ್ಯಮಗಳ ಸಂಶೋಧನೆಗಳಿಗೆ ಜಾಗತಿಕ ಮಾನ್ಯತೆ ಒದಗಿಸುವ ಉದ್ದೇಶದಿಂದ ಬೆಂಗಳೂರು ಬಯೋ–ಇನ್ನೋವೇಶನ್ ಸೆಂಟರ್ (ಬಿಬಿಸಿ) ಹಾಗೂ ಎನ್ಎಬಿಎಲ್ ಜತೆ ಒಪ್ಪಂದ ನಡೆದಿದೆ.

ಈ ಒಪ್ಪಂದಕ್ಕೆ ಬಿಬಿಸಿಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಆದಿಲ್ ಮತ್ತು ಎನ್ಎಬಿಎಲ್ (ಕ್ವಾಲಿಟಿ ಕಂಟ್ರೋಲ್ ಇಂಡಿಯಾ)ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮಾನಂದ ಶುಕ್ಲಾ ಸಹಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸರ್ಕಾರದ ಐಟಿ– ಬಿಟಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ‘ಜೀವ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವನ್ನು ಜಾಗತಿಕ ಹಬ್ ಆಗಿ ಗುರುತಿಸಿಕೊಳ್ಳುವುದಕ್ಕೆ ಈ ಒಪ್ಪಂದ ಬಹಳ ಸಹಕಾರಿಯಾಗಲಿದೆ. ನಾವು 512ಕ್ಕೂ ಹೆಚ್ಚಿನ ನಾವೀನ್ಯತಾ ಯೋಜನೆಗಳಿಗೆ ಬೆಂಬಲ ನೀಡಲಿದ್ದೇವೆ. ಇದರಲ್ಲಿ 24 ಜಾಗತಿಕ ನವೋದ್ಯಮಗಳು ಮತ್ತು 74 ಪೇಟೆಂಟ್ಗಳು ಸೇರಿವೆ. ಜೈವಿಕ ತಂತ್ರಜ್ಞಾನದಲ್ಲಿ ಬೆಂಗಳೂರು ಬಯೋ ಇನ್ನೋವೇಷನ್ ಸೆಂಟರ್ ಅನ್ನು ಜಾಗತಿಕ ನಾವೀನ್ಯತಾ ಕೇಂದ್ರವಾಗಿ ಬಲಪಡಿಸಲು ಈ ಒಪ್ಪಂದ ಅನುಕೂಲಕರವಾಗಿದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-735028828

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.