ಶುಕ್ರವಾರ, ಸೆಪ್ಟೆಂಬರ್ 25, 2020
28 °C
ಶೇ 20ರಷ್ಟು ಎಂಎಸ್‌ಎಂಇ ಇನ್ನೂ ಆರಂಭವಾಗಿಲ್ಲ: ಅರಸಪ್ಪ

ಶ್ರೇಯಾಂಕ ಕುಸಿಯಲು ಸರ್ಕಾರದ ದೌರ್ಬಲ್ಯ ಕಾರಣ: ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಸುಲಲಿತ ಉದ್ದಿಮೆ ವಹಿ ವಾಟಿನ ವಾರ್ಷಿಕ ಶ್ರೇಯಾಂಕದಲ್ಲಿ ಕರ್ನಾಟಕವು 8ನೇ ಸ್ಥಾನದಿಂದ 17ನೇ ಸ್ಥಾನಕ್ಕೆ ಕುಸಿಯಲು ಸರ್ಕಾರದ ದೌರ್ಬಲ್ಯಗಳೇ ಕಾರಣ ಎಂದು ಕರ್ನಾ ಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಕೆ.ಬಿ. ಅರಸಪ್ಪ ದೂರಿದರು.

ಕೈಗಾರಿಕೆ ಆರಂಭಿಸಲು ಬಯ ಸುವವರಿಗೆ ಸೂಕ್ತ ಸಮಯದಲ್ಲಿ ಜಮೀ ನು ಹಾಗೂ ಕೆಲವು ಅನು ಮತಿಗಳು ಸಿಗುತ್ತಿಲ್ಲ. ಈ ಕಾರಣದಿಂದ ಇಂತಹ ದುಃಸ್ಥಿತಿ ಬಂದಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೈಗಾರಿಕೆಗಳನ್ನು ತ್ವರಿತಗತಿಯಲ್ಲಿ ಆರಂಭಿಸಲು ಅನುಕೂಲವಾಗುವಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿ ತಿಂಗಳು ಏಕಗವಾಕ್ಷಿ ಸಮಿತಿ ಸಭೆ ನಡೆಸಬೇಕು. ಕೆಲವು ಜಿಲ್ಲೆಗಳಲ್ಲಿ ಸಭೆ ನಡೆಯದೆ ಹಲವು ತಿಂಗಳುಗಳೇ ಕಳೆದಿವೆ. ಕೈಗಾರಿಕೆ ಸ್ಥಾಪನೆ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲ ಅನುಮತಿಗಳು ತಡವಾಗುತ್ತಿವೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು.

‘ಲಾಕ್‌ಡೌನ್‌ ಸಡಿಲಿಕೆಯಾದರೂ ಶೇಕಡ 20ರಷ್ಟು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಇನ್ನೂ ಆರಂಭ ಗೊಂಡಿಲ್ಲ. ಸರ್ಕಾರ ಘೋಷಿಸಿರುವ ಆರ್ಥಿಕ ನೆರವು ಸಂಕಷ್ಟದಲ್ಲಿರುವ ಕೈಗಾರಿಕೆಗಳಿಗೆ ಸಿಗುತ್ತಿಲ್ಲ. ಲಾಕ್‌ಡೌನ್‌ ಅವಧಿಯಲ್ಲಿ ಎಂಎಸ್‌ಎಂಇಗಳಿಗೆ ಪ್ರತಿ ತಿಂಗಳು ಸುಮಾರು ₹ 15 ಸಾವಿರ ಕೋಟಿ ನಷ್ಟ ಆಗಿತ್ತು. ಕೇಂದ್ರದ ಆತ್ಮನಿರ್ಭರ‌ ಯೋಜನೆಯು ಸಣ್ಣ ಆಶಾಕಿರಣ ಮೂಡಿಸಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು