ನವೆಂಬರ್‌ನಲ್ಲಿ ‘ಟೆಕ್‌ ಸಮ್ಮೇಳನ’

7
ಮೈಸೂರಿನಲ್ಲಿ ₹ 4 ಸಾವಿರ ಕೋಟಿ ಬಂಡವಾಳ ಹೂಡಿಕೆ: ಜಾರ್ಜ್‌

ನವೆಂಬರ್‌ನಲ್ಲಿ ‘ಟೆಕ್‌ ಸಮ್ಮೇಳನ’

Published:
Updated:
ಕೆ.ಜೆ.ಜಾರ್ಜ್‌

ಮೈಸೂರು: ‘ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನಕ್ಕೆ ಬದಲಾಗಿ ಈ ಬಾರಿಯೂ ಬೆಂಗಳೂರಿನಲ್ಲಿ ‘ಟೆಕ್‌ ಸಮ್ಮೇಳನ’ ಆಯೋಜಿಸಲಾಗುವುದು’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್‌ ಇಲ್ಲಿ ಮಂಗಳವಾರ ತಿಳಿಸಿದರು.

‘ನವೆಂಬರ್‌ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಹಲವು ದೇಶಗಳ ಹೂಡಿಕೆದಾರರು ಪಾಲ್ಗೊಳ್ಳಲಿದ್ದಾರೆ. ತಂತ್ರಜ್ಞಾನದ ಹೊಸ ಆವಿಷ್ಕಾರಗಳನ್ನು ಹಂಚಿಕೊಳ್ಳಲಿದ್ದಾರೆ. ಇದು ಕೇವಲ ಬೆಂಗಳೂರಿಗೆ ಸಂಬಂಧಿಸಿದ ಸಮ್ಮೇಳನ ಅಲ್ಲ. ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳಿಗೆ ಹೂಡಿಕೆದಾರರನ್ನು ಸೆಳೆಯುವ ಕಾರ್ಯಕ್ರಮ ಇದಾಗಿರಲಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಮೈಸೂರಿನಲ್ಲಿ ಸದ್ಯದಲ್ಲೇ 10 ಬೃಹತ್‌ ಕೈಗಾರಿಕೆಗಳು ಸ್ಥಾಪನೆಯಾಗಲಿದ್ದು, ₹ 4 ಸಾವಿರ ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಸುಮಾರು 35 ಸಾವಿರ ಉದ್ಯೋಗಾವಕಾಶಗಳು ದೊರೆಯಲಿವೆ. ಉದ್ಯೋಗದಲ್ಲಿ ಸ್ಥಳೀಯರಿಗೆ ಅವಕಾಶ ನೀಡಲು ಸೂಚನೆ ನೀಡಿದ್ದೇನೆ’ ಎಂದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !