ನವದೆಹಲಿ / ಮುಂಬೈ: ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯಕ್ಕೆ ಶುಕ್ರವಾರ ನಡೆದ ಒಂದೇ ದಿನದ ವಹಿವಾಟಿನಲ್ಲಿ ₹69 ಸಾವಿರ ಕೋಟಿಗೂ ಹೆಚ್ಚು ಸೇರ್ಪಡೆಯಾಗಿದೆ.

ಸಮೂಹದ ಎಲ್ಲಾ ಕಂಪನಿಗಳ ಒಟ್ಟು ಮಾರುಕಟ್ಟೆ ಬಂಡವಾಳ ಮೌಲ್ಯ (ಎಂ–ಕ್ಯಾಪ್) ₹13.96 ಲಕ್ಷ ಕೋಟಿಗೆ ಏರಿಕೆಯಾಗಿದೆ.

ಅಮೆರಿಕದ ಹಿಂಡನ್ಬರ್ಗ್ ರಿಚರ್ಸ್ ಸಂಸ್ಥೆಯು, ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ನೇತೃತ್ವದ ಉದ್ಯಮ ಸಮೂಹವು ಷೇರು ಮೌಲ್ಯದ ಮೇಲೆ ಕೃತಕವಾಗಿ ಪ್ರಭಾವ ಬೀರುವ ಕೆಲಸಗಳಲ್ಲಿ ತೊಡಗಿರುವುದಾಗಿ ಆರೋಪ ಮಾಡಿತ್ತು. ಈ ಕುರಿತಾಗಿ ಸೆಬಿ ತನಿಖೆ ನಡೆಸಿತ್ತು. ಆರೋಪಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಸೆಬಿ ಹೇಳಿದೆ. ಇದರಿಂದ ಶುಕ್ರವಾರದ ವಹಿವಾಟಿನಲ್ಲಿ ಕಂಪನಿಯ ಷೇರಿನ ಮೌಲ್ಯ ಹೆಚ್ಚಳಗೊಂಡಿದೆ.

ಅದಾನಿ ಪವರ್ ಷೇರಿನ ಮೌಲ್ಯ ಶೇ 12ರಷ್ಟು ಹೆಚ್ಚಳಗೊಂಡಿದೆ. ಅದಾನಿ ಟೋಟಲ್ ಗ್ಯಾಸ್, ಅದಾನಿ ಗ್ರೀನ್ ಎನರ್ಜಿ, ಅದಾನಿ ಎಂಟರ್ಪ್ರೈಸಸ್, ಅದಾನಿ ಎನರ್ಜಿ ಸಲ್ಯೂಷನ್ಸ್, ಶಾಂಘೈ ಇಂಡಸ್ಟ್ರೀಸ್, ಎಸಿಸಿ, ಅದಾನಿ ಪೋರ್ಟ್ಸ್ ಮತ್ತು ಅಂಬುಜಾ ಸಿಮೆಂಟ್ಸ್ನ ಷೇರಿನ ಮೌಲ್ಯ ಏರಿಕೆಯಾಗಿದೆ.

ಸೂಚ್ಯಂಕ ಇಳಿಕೆ: ಲಾಭದ ಗಳಿಕೆಗಾಗಿ ಹೂಡಿಕೆದಾರರು ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕುಗಳ ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಶುಕ್ರವಾರದ ವಹಿವಾಟಿನಲ್ಲಿ ಷೇರುಪೇಟೆ ಸೂಚ್ಯಂಕಗಳು ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 387 ಅಂಶ ಇಳಿಕೆಯಾಗಿ, 82,626ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 96 ಅಂಶ ಕಡಿಮೆಯಾಗಿ, 25,327ಕ್ಕೆ ಕೊನೆಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.