ಮುಂಬೈ: ಬ್ಯಾಂಕ್ ಷೇರುಗಳ ಭರ್ಜರಿ ಖರೀದಿ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿನ ಸಕಾರಾತ್ಮಕ ಪ್ರವೃತ್ತಿಯಿಂದಾಗಿ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ದೇಶೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಚೇತರಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 630 ಅಂಶ ಹೆಚ್ಚಳವಾಗಿ, 77,261ಕ್ಕೆ ತಲುಪಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 203 ಅಂಶ ಏರಿಕೆಯಾಗಿ, 23,978.70ಕ್ಕೆ ತಲುಪಿದೆ.

ಆಕ್ಸಿಸ್ ಬ್ಯಾಂಕ್, ಏಷ್ಯನ್ ಪೇಂಟ್ಸ್, ಬಜಾಜ್ ಫಿನ್ಸರ್ವ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ಲಾಭ ಗಳಿಸಿವೆ.

ಸನ್ ಫಾರ್ಮಾ, ಇನ್ಫೊಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಎಚ್ಸಿಎಲ್ ಟೆಕ್, ಟೆಕ್ ಮಹೀಂದ್ರಾ ಮತ್ತು ಟೈಟಾನ್ ಕಂಪನಿಯ ಷೇರಿನ ಮೌಲ್ಯದಲ್ಲಿ ಇಳಿದಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ದರವು ಶೇ 0.51ರಷ್ಟು ಏರಿಕೆಯಾಗಿದ್ದು, ಪ್ರತೀ ಬ್ಯಾರಲ್ ದರವು 96.44 ಡಾಲರ್ ಆಗಿದೆ. ಹೊರ್ಮುಜ್ ಜಲಸಂಧಿ ತೆರೆಯುವ ಬಗ್ಗೆ ಇರುವ ಅನಿಶ್ಚಿತತೆಯು ತೈಲ ಬೆಲೆಯ ಮೇಲೆ ಪ್ರಭಾವ ಬೀರಿದೆ.

ರೂಪಾಯಿ ಮೌಲ್ಯ 10 ಪೈಸೆ ಏರಿಕೆ: ಅಮೆರಿಕ-ಇರಾನ್ ನಡುವಿನ ಸಂಘರ್ಷದ ನಡುವೆಯೂ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯವು 10 ಪೈಸೆ ಏರಿಕೆಯಾಗಿದ್ದು, ₹92.41ಕ್ಕೆ ತಲುಪಿದೆ. ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯವು ಗುರುವಾರ 3 ಪೈಸೆ ಏರಿಕೆಯಾಗಿ ₹92.51ಕ್ಕೆ ತಲುಪಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.