ಬಿಲಿಯನ್ಬ್ರೇನ್ಸ್ ಗರಾಜ್ ವೆಂಚರ್ಸ್ (ಗ್ರೋವ್) ಕಂಪನಿಯ ಷೇರುಮೌಲ್ಯವು ₹235ಕ್ಕೆ ತಲುಪಬಹುದು ಎಂದು ಬ್ರೋಕರೇಜ್ ಕಂಪನಿ ಮೋತಿಲಾಲ್ ಓಸ್ವಾಲ್ ಅಂದಾಜು ಮಾಡಿದೆ. ಮಾರ್ಚ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಗ್ರೋವ್ ಕಂಪನಿಯ ಕಾರ್ಯಾಚರಣೆ ವರಮಾನವು ಹಿಂದಿನ ವರ್ಷದ ಇದೇ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ 88ರಷ್ಟು ಹೆಚ್ಚಳ ಸಾಧಿಸಿದೆ. ಕಂಪನಿಯು ಒಟ್ಟು ₹1,505 ಕೋಟಿ ವರಮಾನ ಗಳಿಸಿದೆ. ಕಂಪನಿಯ ತೆರಿಗೆ ನಂತರದ ಲಾಭವು ಹಿಂದಿನ ವರ್ಷದ ಮಾರ್ಚ್ ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಶೇ 122ರಷ್ಟು ಹೆಚ್ಚಾಗಿದ್ದು ₹686 ಕೋಟಿಗೆ ತಲುಪಿದೆ.

ಗ್ರೋವ್ ಕಂಪನಿಯ ವರಮಾನವು ಮುಂದಿನ ದಿನಗಳಲ್ಲಿ ಉತ್ತಮವಾಗಿ ಇರಲಿದೆ. ಕಂಪನಿಯು ಈಚೆಗೆ ಎಂಟಿಎಫ್ ಹಾಗೂ ಕಮಾಡಿಟೀಸ್ ಸೇವೆಗಳನ್ನು ಆರಂಭಿಸಿದೆ, ಈ ಮೂಲಕ ಕಂಪನಿಯ ಬ್ರೋಕರೇಜ್ ವಹಿವಾಟು ಹೆಚ್ಚಿನ ಮಾರುಕಟ್ಟೆ ಪಾಲು ಪಡೆಯುತ್ತಿದೆ. ಇದು ಇನ್ನಷ್ಟು ಬೆಳವಣಿಗೆಗೆ ಉತ್ತೇಜನ ನೀಡಲಿದೆ ಎಂದು ಮೋತಿಲಾಲ್ ಓಸ್ವಾಲ್ ಹೇಳಿದೆ. ಬುಧವಾರದ ವಹಿವಾಟಿನ ಅಂತ್ಯಕ್ಕೆ ಗ್ರೋವ್ ಷೇರುಮೌಲ್ಯವು ₹217.70 ಆಗಿತ್ತು.

(ಬ್ರೋಕರೇಜ್ ಕಂಪನಿಗಳು ನೀಡುವ ಮಾಹಿತಿ, ವಿವರಕ್ಕೆ ಪತ್ರಿಕೆ ಹೊಣೆಯಲ್ಲ)

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-1140029349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.