ಮುಂಬೈ (ಪಿಟಿಐ): ಹೂಡಿಕೆದಾರರು ಬ್ಲೂಚಿಪ್ ಷೇರುಗಳನ್ನು ಖರೀದಿಸಿದ್ದುದು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶವು ಮಾರುಕಟ್ಟೆಯ ನಿರೀಕ್ಷೆಗಳಿಗೆ ಅನುಗುಣವಾಗಿ ಇದ್ದಿದ್ದು ಸೋಮವಾರದ ವಹಿವಾಟಿನಲ್ಲಿ ಷೇರುಪೇಟೆ ಸೂಚ್ಯಂಕಗಳ ಏರಿಕೆಗೆ ಕಾರಣವಾದವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 356 ಅಂಶ ಏರಿಕೆ ಕಂಡಿತು, ರಾಷ್ಟ್ರೀಯ ಷೇರುಪೇಟೆಯ ನಿಫ್ಟಿ ಸೂಚ್ಯಂಕವು 121 ಅಂಶ ಜಿಗಿಯಿತು.

‘ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶವು ಹೂಡಿಕೆದಾರರ ನಿರೀಕ್ಷೆಗೆ ಪೂರಕವಾಗಿತ್ತು, ಕಂಪನಿಗಳ ನಾಲ್ಕನೆಯ ತ್ರೈಮಾಸಿಕದ ಹಣಕಾಸು ಫಲಿತಾಂಶವು ನಿರೀಕ್ಷೆಗಿಂತ ಉತ್ತಮವಾಗಿದೆ. ಇವು ಮಾರುಕಟ್ಟೆ ಏರಿಕೆಗೆ ಕಾರಣ’ ಎಂದು ಜಿಯೋಜಿತ್ ಇನ್ವೆಸ್ಟ್ಮೆಂಟ್ಸ್ ಲಿಮಿಟೆಡ್ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ತಿಳಿಸಿದ್ದಾರೆ.

ಐದು ವಿಧಾನಸಭೆಗಳ ಪೈಕಿ ಮೂರರಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿರುವುದು ರಾಜಕೀಯ ಸ್ಥಿರತೆಗೆ ಬಲ ನೀಡಲಿದೆ. ಜಿಎಸ್ಟಿ ಸಂಗ್ರಹ ಜಾಸ್ತಿ ಆಗಿರುವುದು ಹಾಗೂ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ವಾಹನಗಳ ಮಾರಾಟ ಆಗಿರುವುದು ಬೇಡಿಕೆ ಚೆನ್ನಾಗಿ ಇದೆ ಎಂಬುದನ್ನು ಹೇಳುತ್ತಿವೆ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವಿಸಸ್ನ ಸಂಪತ್ತು ನಿರ್ವಹಣಾ ವಿಭಾಗದ ಸಂಶೋಧನಾ ಮುಖ್ಯಸ್ಥ ಸಿದ್ಧಾರ್ಥ ಖೇಮ್ಕ ತಿಳಿಸಿದ್ದಾರೆ.

ರೂಪಾಯಿ ಮೌಲ್ಯ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 39 ಪೈಸೆ ಕುಸಿದಿದೆ. ವಹಿವಾಟಿನ ಅಂತ್ಯದ ವೇಳೆಗೆ ಮೌಲ್ಯವು 95.23 ಆಗಿದೆ. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-1660745153

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.