ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಈಕ್ವಿಟಿ ಎಂ.ಎಫ್‌: ₹38,239 ಕೋಟಿ ಹೂಡಿಕೆ

Published : 10 ಸೆಪ್ಟೆಂಬರ್ 2024, 13:58 IST
Last Updated : 10 ಸೆಪ್ಟೆಂಬರ್ 2024, 13:58 IST
ಫಾಲೋ ಮಾಡಿ
Comments

ನವದೆಹಲಿ: ಆಗಸ್ಟ್‌ ತಿಂಗಳಿನಲ್ಲಿ ಈಕ್ವಿಟಿ ಮ್ಯೂಚುವಲ್‌ ಫಂಡ್‌ನಲ್ಲಿ ₹38,239 ಕೋಟಿ ಬಂಡವಾಳ ಹೂಡಿಕೆಯಾಗಿದೆ.

ಜುಲೈನಲ್ಲಿ ₹37,113 ಕೋಟಿ ಬಂಡವಾಳ ಹೂಡಿಕೆಯಾಗಿತ್ತು. ಇದಕ್ಕೆ ಹೋಲಿಸಿದರೆ ಶೇ 3ರಷ್ಟು ಏರಿಕೆಯಾಗಿದೆ. ಎಸ್‌ಐಪಿ ಮೂಲಕ ₹23,547 ಕೋಟಿ ಹೂಡಿಕೆಯಾಗಿದೆ ಎಂದು ಭಾರತೀಯ ಮ್ಯೂಚುವಲ್ ಫಂಡ್ ಕಂಪನಿಗಳ ಒಕ್ಕೂಟ (ಎಎಂಎಫ್‌ಐ) ಮಂಗಳವಾರ ತಿಳಿಸಿದೆ.

ಒಟ್ಟಾರೆ ಆಗಸ್ಟ್‌ನಲ್ಲಿ ಮ್ಯೂಚುವಲ್‌ ಫಂಡ್‌ನಲ್ಲಿ ₹1.08 ಲಕ್ಷ ಕೋಟಿ ಹೂಡಿಕೆಯಾಗಿದೆ. ಜುಲೈನಲ್ಲಿ ₹1.9 ಲಕ್ಷ ಕೋಟಿ ಹೂಡಿಕೆಯಾಗಿತ್ತು. ಜುಲೈ ಅಂತ್ಯದ ವೇಳೆಗೆ ₹65 ಲಕ್ಷ ಕೋಟಿಯಿದ್ದ ಈ ಉದ್ಯಮದ ಸಂಪತ್ತಿನ ನಿರ್ವಹಣಾ ಮೌಲ್ಯವು (ಎಯುಎಂ) ಆಗಸ್ಟ್‌ನಲ್ಲಿ ₹66.7 ಲಕ್ಷ ಕೋಟಿಗೆ ಮುಟ್ಟಿದೆ ಎಂದು ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT