ಮುಂಬೈ (ಪಿಟಿಐ): ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷದ ಪರಿಣಾಮವಾಗಿ ದೇಶದ ಷೇರುಪೇಟೆಗಳಲ್ಲಿ ‘ಕರಡಿ ಕುಣಿತ’ವು ಶುಕ್ರವಾರವೂ ಮುಂದುವರಿದಿದೆ. ಶುಕ್ರವಾರದ ಷೇರುಪೇಟೆ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ 2ರಷ್ಟು ಕುಸಿದಿವೆ.

ಕಚ್ಚಾ ತೈಲದ ಬೆಲೆ ಏರಿಕೆಯು ಹಣದುಬ್ಬರ ಹೆಚ್ಚಳದ ಆತಂಕ ಉಂಟು ಮಾಡಿದೆ. ವಿದೇಶಿ ಬಂಡವಾಳದ ನಿರಂತರ ಹೊರಹರಿವು ಮತ್ತು ರೂಪಾಯಿ ಮೌಲ್ಯದ ಇಳಿಕೆಯು ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ. ಇವು ಷೇರುಪೇಟೆ ಸೂಚ್ಯಂಕಗಳ ಇಳಿಕೆಗೆ ಕಾರಣವಾಗಿವೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1,470 ಅಂಶ (ಶೇ 1.93ರಷ್ಟು) ಇಳಿಕೆಯಾಗಿ, 74,563ಕ್ಕೆ ವಹಿವಾಟು ಅಂತ್ಯಗೊಂಡಿದೆ. ವಹಿವಾಟಿನ ವೇಳೆ 1,579 ಅಂಶ ಕುಸಿದಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 488 ಅಂಶ (ಶೇ 2.06ರಷ್ಟು) ಕಡಿಮೆಯಾಗಿ, 23,151ಕ್ಕೆ ಕೊನೆಗೊಂಡಿದೆ.

ಷೇರುಪೇಟೆ ಸೂಚ್ಯಂಕಗಳ ಇಳಿಕೆಯಿಂದ ಹೂಡಿಕೆದಾರರ ಸಂಪತ್ತು ಶುಕ್ರವಾರದ ವಹಿವಾಟಿನಲ್ಲಿ ₹10.24 ಲಕ್ಷ ಕೋಟಿಯಷ್ಟು ಕರಗಿದೆ.

ಫೆಬ್ರುವರಿ 27ರಿಂದ ಮಾರ್ಚ್ 13ರವರೆಗೆ ಸೆನ್ಸೆಕ್ಸ್ 6,723 ಅಂಶ (ಶೇ 8.27ರಷ್ಟು) ಕುಸಿದಿದೆ. ಇದರಿಂದ ₹33.68 ಲಕ್ಷ ಕೋಟಿ ಸಂಪತ್ತು ಕರಗಿದೆ.

ಲಾರ್ಸೆನ್ ಆ್ಯಂಡ್ ಟೊಬ್ರೊ, ಟಾಟಾ ಸ್ಟೀಲ್, ಎಸ್ಬಿಐ, ಭಾರತ್ ಎಲೆಕ್ಟ್ರಾನಿಕ್ಸ್, ಮಾರುತಿ ಸುಜುಕಿ ಮತ್ತು ಅಲ್ಟ್ರಾಟೆಕ್ ಸಿಮೆಂಟ್ನ ಷೇರಿನ ಮೌಲ್ಯದಲ್ಲಿ ಇಳಿಕೆ ಆಗಿದೆ. ಹಿಂದುಸ್ತಾನ್ ಯೂನಿಲಿವರ್ ಮತ್ತು ಭಾರ್ತಿ ಏರ್ಟೆಲ್ನ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

‘ಕಚ್ಚಾ ತೈಲದ ಬೆಲೆ ಏರಿಕೆಯು ಹಣದುಬ್ಬರ, ಚಾಲ್ತಿ ಖಾತೆ ಕೊರತೆ ಹೆಚ್ಚಳ ಮತ್ತು ಕಂಪನಿಗಳ ಲಾಭದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯನ್ನು ಉಂಟು ಮಾಡಿದೆ. ಇದರಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಇಳಿಕೆ ಕಂಡವು’ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವಿಸಸ್ ಲಿಮಿಟೆಡ್ನ ವೆಲ್ತ್ ಮ್ಯಾನೇಜ್ಮೆಂಟ್ನ ಸಂಶೋಧನಾ ವಿಭಾಗದ ಮುಖ್ಯಸ್ಥ ಸಿದ್ಧಾರ್ಥ ಖೇಮ್ಕಾ ಹೇಳಿದ್ದಾರೆ.

ಏಷ್ಯಾದ ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾ, ಜಪಾನ್, ಶಾಂಘೈ ಮತ್ತು ಹಾಂಗ್ ಕಾಂಗ್ ನಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ದರವು ಶೇ 0.25ರಷ್ಟು ಏರಿಕೆಯಾಗಿದ್ದು, ಪ್ರತೀ ಬ್ಯಾರಲ್ 100.7 ಡಾಲರ್ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.