ಮುಂಬೈ: ಮಂಗಳವಾರ ಒಂದು ದಿನದ ಮಟ್ಟಿಗೆ ಧನಾತ್ಮಕ ವಹಿವಾಟು ದಾಖಲಿಸಿದ್ದ ಸೆನ್ಸೆಕ್ಸ್ ಮತ್ತು ನಿಫ್ಟಿ ಬುಧವಾರದ ವಹಿವಾಟಿನಲ್ಲಿ ಮತ್ತೆ ತೀವ್ರ ಕುಸಿತ ಕಂಡವು. ಪಶ್ಚಿಮ ಏಷ್ಯಾದಲ್ಲಿನ ಸಮರವು ಹೂಡಿಕೆದಾರರನ್ನು ಭೀತಿಗೆ ನೂಕಿದೆ.

ಬುಧವಾರದ ವಹಿವಾಟಿನಲ್ಲಿ ದೇಶದ ಹೂಡಿಕೆದಾರರ ಸಂಪತ್ತಿನ ಮೌಲ್ಯ ಒಟ್ಟು ₹5.14 ಲಕ್ಷ ಕೋಟಿಯಷ್ಟು ಕಡಿಮೆ ಆಗಿದೆ.

ವಿದೇಶಿ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಹೆಚ್ಚಿನ ಗಮನ ನೀಡಿರುವುದು, ಬ್ಯಾಂಕಿಂಗ್ ವಲಯದ ಬ್ಲ್ಯೂಚಿಪ್ ಕಂಪನಿಗಳ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದುದು ಕೂಡ ಸೂಚ್ಯಂಕಗಳ ಇಳಿಕೆಗೆ ಕಾರಣವಾದವು ಎಂದು ವರ್ತಕರು ತಿಳಿಸಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಬುಧವಾರ 1,342 ಅಂಶ ಕುಸಿದೆ. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 394 ಅಂಶ ಇಳಿಕೆ ಕಂಡಿದೆ.

‘ಪಶ್ಚಿಮ ಏಷ್ಯಾದಲ್ಲಿನ ಸಮರವು ಅಸ್ಥಿರತೆಯನ್ನು ಹೆಚ್ಚು ಮಾಡಿದೆ. ಕಚ್ಚಾ ತೈಲದ ಪೂರೈಕೆಯಲ್ಲಿ ಆಗಬಹುದಾದ ಸಮಸ್ಯೆ, ಹಣದುಬ್ಬರ ಹೆಚ್ಚಳದ ಭೀತಿ, ಆರ್ಥಿಕ ಬೆಳವಣಿಗೆಯ ಮೇಲೆ ಆಗಬಹುದಾದ ಪರಿಣಾಮವು ಹೂಡಿಕೆದಾರರ ಮೇಲೆ ಪ್ರಭಾವ ಬೀರಿವೆ’ ಎಂದು ರೆಲಿಗೇರ್ ಬ್ರೋಕಿಂಗ್ ಲಿಮಿಟೆಡ್ನ ಸಂಶೋಧನಾ ವಿಭಾಗದ ಹಿರಿಯ ಉಪಾಧ್ಯಕ್ಷ ಅಜಿತ್ ಮಿಶ್ರಾ ಹೇಳಿದ್ದಾರೆ.

ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇ 5.76ರಷ್ಟು ಏರಿಕೆ ಕಂಡು ಬ್ಯಾರಲ್ ಒಂದಕ್ಕೆ 92.86 ಅಮೆರಿಕನ್ ಡಾಲರ್ಗೆ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.