ನವದೆಹಲಿ (ಪಿಟಿಐ): ದೇಶದ ಷೇರುಪೇಟೆಗಳು ನಾಲ್ಕು ದಿನಗಳಿಂದ ಕುಸಿತದ ಹಾದಿಯಲ್ಲಿವೆ. ಇದರಿಂದಾಗಿ ಹೂಡಿಕೆದಾರರ ಸಂಪತ್ತು ₹16.77 ಲಕ್ಷ ಕೋಟಿಯಷ್ಟು ಕಡಿಮೆ ಆಗಿದೆ.

ಕಚ್ಚಾ ತೈಲದ ಬೆಲೆಯು ಕಡಿಮೆ ಆಗದೆ ಇರುವುದು ಹಾಗೂ ಜಾಗತಿಕ ಸಂಘರ್ಷಗಳು ಸದ್ಯಕ್ಕೆ ಶಮನ ಆಗಲಿಕ್ಕಿಲ್ಲ ಎಂಬ ಆತಂಕವು ಮಾರುಕಟ್ಟೆಗಳ ಕುಸಿತಕ್ಕೆ ಕಾರಣವಾಗಿವೆ.

ವಿದೇಶಿ ಹೂಡಿಕೆದಾರರು ಭಾರತದ ಬಂಡವಾಳ ಮಾರುಕಟ್ಟೆಗಳಿಂದ ನಿರಂತರವಾಗಿ ಹಣ ಹಿಂಪಡೆಯುತ್ತಿರುವುದು ಹಾಗೂ ರೂಪಾಯಿ ಮೌಲ್ಯವು ಡಾಲರ್ ಎದುರು ಕುಸಿಯುತ್ತಿರುವುದುಕೂಡ ಹೂಡಿಕೆದಾರರು ಹೊಸ ಹೂಡಿಕೆಗೆ ಹಿಂದೇಟು ಹಾಕುವಂತೆ ಮಾಡಿವೆ ಎಂದು ತಜ್ಞರು ಹೇಳಿದ್ದಾರೆ.

ಮಂಗಳವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1,456 ಅಂಶ ಕುಸಿದಿದೆ. ಕಳೆದ ನಾಲ್ಕು ವಹಿವಾಟಿನ ದಿನಗಳಲ್ಲಿ ಸೆನ್ಸೆಕ್ಸ್ ಒಟ್ಟು ಶೇ 4.36ರಷ್ಟು ಇಳಿಕೆ ಕಂಡಿದೆ. ಬಿಎಸ್ಇ ನೋಂದಾಯಿತ ಕಂಪನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯವು ₹16.77 ಲಕ್ಷ ಕೋಟಿಯಷ್ಟು ಕಡಿಮೆ ಆಗಿದೆ.

‘ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆಯಲ್ಲಿ ಪ್ರಗತಿ ಕಾಣುತ್ತಿಲ್ಲ. ಹೊರ್ಮುಜ್ ಜಲಸಂಧಿಯ ಸುತ್ತ ಅಡ್ಡಿಗಳು ಮುಂದುವರಿದಿವೆ. ಇದು ಕಚ್ಚಾ ತೈಲದ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ರೂಪಾಯಿ ಮೌಲ್ಯವು ದಾಖಲೆಯ ಮಟ್ಟಕ್ಕೆ ಕುಸಿಯುತ್ತಿದೆ. ಐ.ಟಿ., ರಿಯಾಲ್ಟಿ ಸೇರಿದಂತೆ ವಿವಿಧ ವಲಯಗಳ ಷೇರುಗಳ ಕುಸಿತವು ಒಟ್ಟಾರೆ ಸೂಚ್ಯಂಕದ ಕುಸಿತಕ್ಕೆ ಕಾರಣವಾಗಿವೆ’ ಎಂದು ಎನ್ರಿಚ್ ಮನಿ ಸಂಸ್ಥೆಯ ಸಿಇಒ ಪೊನ್ಮುಡಿ ಆರ್. ಹೇಳಿದ್ದಾರೆ.

ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇ 3ರಷ್ಟು ಜಾಸ್ತಿ ಆಗಿದ್ದು ಬ್ಯಾರಲ್ ಒಂದಕ್ಕೆ 107.4 ಡಾಲರ್ಗೆ ತಲುಪಿದೆ.

ಬೆಳ್ಳಿ ದರ ₹12 ಸಾವಿರ ಏರಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆ ಮತ್ತು ಜಾಗತಿಕ ಮಟ್ಟದಲ್ಲಿ ಮುಂದುವರಿದಿರುವ ಬಿಕ್ಕಟ್ಟಿನಿಂದ ಮಂಗಳವಾರದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆಯಾಗಿದೆ.

ಶೇ 99.9ರಷ್ಟು ಪರಿಶುದ್ಧತೆಯ 10 ಗ್ರಾಂ ಚಿನ್ನದ ದರವು ₹1,500 ಹೆಚ್ಚಳವಾಗಿ, ₹1,56,800ರಂತೆ ಮಾರಾಟವಾಗಿದೆ. ಬೆಳ್ಳಿ ದರವು ಕೆ.ಜಿಗೆ ₹12 ಸಾವಿರ ಜಿಗಿತವಾಗಿ, ₹2.77 ಲಕ್ಷಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-1650030095

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.