ನವದೆಹಲಿ: ‘ಕೋವಿಡ್–19’ ಸೋಂಕು ಜಗತ್ತಿನಾದ್ಯಂತ ತೀವ್ರವಾಗಿ ವ್ಯಾಪಿಸುತ್ತಿದೆ. ಇದರಿಂದ ಷೇರುಪೇಟೆಯಲ್ಲಿ ನಕಾರಾತ್ಮಕ ವಹಿವಾಟು ನಡೆಯುತ್ತಿದ್ದು, ಬಂಡವಾಳ ಹೊರಹರಿವು ಹೆಚ್ಚಾಗುತ್ತಿದೆ.

ಮುಂಬೈ ಷೇರುಪೇಟೆಯಲ್ಲಿ ವಹಿವಾಟು ನಡೆಸುತ್ತಿರುವ ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ ಎರಡು ವಾರಗಳಿಂದ ಭಾರಿ ಇಳಿಕೆ ಕಂಡುಬರುತ್ತಿದೆ.

ಮಾರ್ಚ್ 2 ರಿಂದ 6ರವರೆಗೆ ನಡೆದಿರುವ ವಹಿವಾಟಿನಲ್ಲಿ ಪ್ರಮುಖ 10 ಕಂಪನಿಗಳಲ್ಲಿ 6 ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ ₹ 95,432 ಕೋಟಿ ಇಳಿಕೆಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಚ್ಡಿಎಫ್ಸಿ ಬ್ಯಾಂಕ್ ಹೆಚ್ಚಿನ ನಷ್ಟ ಕಂಡಿವೆ.

ರಿಲಯನ್ಸ್ ಇಂಡಸ್ಟ್ರೀಸ್ (ಆರ್ಐಎಲ್) ಮಾರುಕಟ್ಟೆ ಮೌಲ್ಯದಲ್ಲಿ ₹37,144 ಕೋಟಿ ಕಡಿಮೆಯಾಗಿದ್ದು, ಒಟ್ಟಾರೆ ಮಾರುಕಟ್ಟೆ ಮೌಲ್ಯ₹8,05,119 ಕೋಟಿಗೆ ಇಳಿಕೆಯಾಗಿದೆ.

ಎಚ್ಡಿಎಫ್ಸಿ ಬ್ಯಾಂಕ್ಗೆ ₹23,435 ಕೋಟಿ ನಷ್ಟವಾಗಿದ್ದು, ಒಟ್ಟಾರೆ ಮಾರುಕಟ್ಟೆ ಮೌಲ್ಯ ₹6,22,110 ಕೋಟಿಗೆ ಇಳಿಕೆಯಾಗಿದೆ.

ಕೋವಿಡ್–19 ಸೋಂಕು ಹರಡುತ್ತಿರುವುದು ಹಾಗೂ ಯೆಸ್ ಬ್ಯಾಂಕ್ ಬಿಕ್ಕಟ್ಟು ವಾರದ ವಹಿವಾಟಿನ ಮೇಲೆ ಪರಿಣಾಮ ಬೀರಿದೆ. ಕೋವಿಡ್ನಿಂದಾಗಿ ಜಾಗತಿಕ ಆರ್ಥಿಕ ಹಿಂಜರಿತದ ಆತಂಕವೂ ಎದುರಾಗಿದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಫೆಬ್ರುವರಿ 24 ರಿಂದ 28ರವರೆಗೆ ನಡೆದಿದ್ದ ವಹಿವಾಟಿನಲ್ಲಿ 10 ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ ₹ 3.35 ಲಕ್ಷ ಕೋಟಿಗಳಷ್ಟು ಇಳಿಕೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.