ನವದೆಹಲಿ (ಪಿಟಿಐ): 2025–26ರ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ನಿವ್ವಳ ಲಾಭದಲ್ಲಿ ಶೇ 12.5ರಷ್ಟು ಇಳಿಕೆ ಆಗಿದೆ.

2024–25ರ ಆರ್ಥಿಕ ವರ್ಷದಲ್ಲಿ ಕಂಪನಿಯು ₹19,407 ಕೋಟಿ ಲಾಭ ಗಳಿಸಿತ್ತು. ಅದು ಈ ಬಾರಿ ₹16,971 ಕೋಟಿಗೆ ಇಳಿದಿದೆ ಎಂದು ಕಂಪನಿ ಶುಕ್ರವಾರ ಷೇರುಪೇಟೆಗೆ ತಿಳಿಸಿದೆ. ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿ ₹18,645 ಕೋಟಿ ಲಾಭ ಗಳಿಸಿತ್ತು.

ಜಾಗತಿಕ ಮಟ್ಟದಲ್ಲಿ ಉಂಟಾದ ಇಂಧನ ಬಿಕ್ಕಟ್ಟಿನಿಂದಾಗಿ ಕಂಪನಿಯ ವ್ಯವಹಾರದ ಮೇಲೆ ಪರಿಣಾಮ ಬೀರಿದೆ. ಕಂಪನಿಯ ವರಮಾನವು ₹2.69 ಲಕ್ಷ ಕೋಟಿಯಿಂದ ₹3.03 ಲಕ್ಷ ಕೋಟಿಗೆ ಹೆಚ್ಚಳವಾಗಿದೆ.

ಕಳೆದ ಪೂರ್ಣ ಆರ್ಥಿಕ ವರ್ಷದಲ್ಲಿ ಕಂಪನಿಯು ₹80,775 ಕೋಟಿ ಲಾಭ ಗಳಿಸಿತ್ತು. 2024–25ರಲ್ಲಿ ₹69,648 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದ ಪ್ರಮಾಣ ಶೇ 16ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ. ರಿಲಯನ್ಸ್ ರಿಟೇಲ್ ಲಾಭ ₹3,563 ಕೋಟಿಯಾಗಿದೆ. ಜಿಯೊ ಪ್ಲ್ಯಾಟ್ಫಾರ್ಮ್ಸ್ ಕಂಪನಿಯು ಮಾರ್ಚ್ ತ್ರೈಮಾಸಿಕದಲ್ಲಿ ₹7,935 ಕೋಟಿ ತೆರಿಗೆ ನಂತರದ ಲಾಭ ಗಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-51-1490342403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.