ಮುಂಬೈ: ಎಚ್ಡಿಎಫ್ಸಿ ಬ್ಯಾಂಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ನ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಶುಕ್ರವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 693 ಅಂಶ ಇಳಿಕೆಯಾಗಿ, 81,306ಕ್ಕೆ ವಹಿವಾಟು ಕೊನೆಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 213 ಅಂಶ ಕಡಿಮೆಯಾಗಿ, 24,870ಕ್ಕೆ ಅಂತ್ಯಗೊಂಡಿದೆ.

ಏಷ್ಯನ್ ಪೇಂಟ್ಸ್, ಅಲ್ಟ್ರಾಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಐಟಿಸಿ, ಎಚ್ಸಿಎಲ್ ಟೆಕ್, ಕೋಟಕ್ ಮಹೀಂದ್ರ ಬ್ಯಾಂಕ್, ಅದಾನಿ ಪೋರ್ಟ್ಸ್, ಟಿಸಿಎಸ್, ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಟೆಕ್ ಮಹೀಂದ್ರ ಕಂಪನಿಯ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. ಮಹೀಂದ್ರ ಆ್ಯಂಡ್ ಮಹೀಂದ್ರ, ಮಾರುತಿ ಸುಜುಕಿ, ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಸನ್ ಫಾರ್ಮಾ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ಏಷ್ಯಾದ ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾ, ಜಪಾನ್, ಶಾಂಘೈ ಮತ್ತು ಹಾಂಗ್ಕಾಂಗ್ ಮಾರುಕಟ್ಟೆಯು ಸಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿವೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಗುರುವಾರದ ವಹಿವಾಟಿನಲ್ಲಿ ₹1,246 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.24ರಷ್ಟು ಇಳಿಕೆಯಾಗಿದೆ. ಪ್ರತೀ ಬ್ಯಾರೆಲ್ ದರವು 67.52 ಡಾಲರ್ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.