ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆ: ಹೊಸ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಸೆನ್ಸೆಕ್ಸ್, ನಿಫ್ಟಿ

Published 20 ಡಿಸೆಂಬರ್ 2023, 5:29 IST
Last Updated 20 ಡಿಸೆಂಬರ್ 2023, 5:29 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಯ ಸೂಚ್ಯಂಕಗಳು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದವು.

30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 475.88 ಪಾಯಿಂಟ್‌ಗಳಷ್ಟು ಜಿಗಿದು 71,913ರಲ್ಲಿ ವಹಿವಾಟು ಆರಂಭಿಸುವ ಮೂಲಕ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿತ್ತು. ನಿಫ್ಟಿ 138.8 ಪಾಯಿಂಟ್‌ಗಳ ಏರಿಕೆಯೊಂದಿಗೆ ತನ್ನ ದಾಖಲೆಯ ಗರಿಷ್ಠ 21,591 ರಲ್ಲಿ ವಹಿವಾಟು ಆರಂಭಿಸಿತು.

ಸೆನ್ಸೆಕ್ಸ್ ಸಂಸ್ಥೆಗಳ ಪೈಕಿ, ವಿಪ್ರೊ, ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ರಿಲಯನ್ಸ್ ಇಂಡಸ್ಟ್ರೀಸ್, ಟೆಕ್ ಮಹೀಂದ್ರಾ, ಎನ್‌ಟಿಪಿಸಿ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಪ್ರಮುಖವಾಗಿ ಲಾಭ ಗಳಿಸಿದವು.

ಮಹೀಂದ್ರ ಅಂಡ್ ಮಹೀಂದ್ರ, ಮಾರುತಿ, ಆಕ್ಸಿಸ್ ಬ್ಯಾಂಕ್ ಮತ್ತು ಹಿಂದೂಸ್ತಾನ್ ಯೂನಿಲಿವರ್ ನಷ್ಟ ಅನುಭವಿಸಿವೆ.

ಏಷ್ಯಾದ ಮಾರುಕಟ್ಟೆಗಳಲ್ಲಿ ಸಿಯೋಲ್, ಟೋಕಿಯೊ ಮತ್ತು ಹಾಂಗ್ ಕಾಂಗ್ ಲಾಭದಲ್ಲಿದ್ದರೆ, ಶಾಂಘೈ ಸೂಚ್ಯಂಕ ಕುಸಿದಿತ್ತು.

ಬ್ರೆಂಟ್ ಕಚ್ಚಾ ತೈಲ ದರವು ಬ್ಯಾರೆಲ್‌ಗೆ ಶೇಕಡ 0.10 ರಷ್ಟು ಕುಸಿದು 79.15 ಡಾಲರ್‌ಗೆ ಮಾರಾಟವಾಗುತ್ತಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಮಂಗಳವಾರ 601.52 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಹಿಂಪಡೆದಿದ್ದಾರೆ ಎಂದು ವಿನಿಮಯ ಕೇಂದ್ರ ಮಾಹಿತಿ ನೀಡಿದೆ.

__________________________

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT