ಮುಂಬೈ: ಐಸಿಐಸಿಐ ಬ್ಯಾಂಕ್, ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಇನ್ಫೊಸಿಸ್ ಷೇರುಗಳ ಖರೀದಿಯಿಂದಾಗಿ ಮಂಗಳವಾರದ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳು ಹೊಸ ಎತ್ತರಕ್ಕೆ ಜಿಗಿದಿವೆ.

ವಿದೇಶಿ ಬಂಡವಾಳ ಒಳಹರಿವು ಹೆಚ್ಚಳ ಕೂಡ ಹೂಡಿಕೆದಾರರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ರಿಯಾಲ್ಟಿ, ಗ್ರಾಹಕರ ಬಳಕೆಯ ವಸ್ತುಗಳು ಮತ್ತು ಯುಟಿಲಿಟಿ ಷೇರುಗಳ ಖರೀದಿಯು ಷೇರುಪೇಟೆಗಳ ಏರಿಕೆಗೆ ವರದಾನವಾಯಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 308 ಅಂಶ ಏರಿಕೆ ಕಂಡು, 77,301 ಅಂಶಗಳಿಗೆ ತಲುಪಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 92 ಅಂಶ ಏರಿಕೆ ಕಂಡು, 23,557 ಅಂಶಗಳಲ್ಲಿ ಸ್ಥಿರಗೊಂಡಿತು.

ಸೆನ್ಸೆಕ್ಸ್ ಗುಚ್ಛದಲ್ಲಿನ ಪವರ್ಗ್ರಿಡ್, ವಿಪ್ರೊ, ಐಸಿಐಸಿಐ ಬ್ಯಾಂಕ್, ಟೈಟನ್, ಮಹೀಂದ್ರ ಆ್ಯಂಡ್ ಮಹೀಂದ್ರ, ಎಕ್ಸಿಸ್ ಬ್ಯಾಂಕ್, ಎಚ್ಡಿಎಫ್ಸಿ ಬ್ಯಾಂಕ್, ಇನ್ಫೊಸಿಸ್, ಜೆಎಸ್ಡಬ್ಲ್ಯು ಸ್ಟೀಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ಮಾರುತಿ ಸುಜುಕಿ, ಅಲ್ಟ್ರಾಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಐಟಿಸಿ ಹಾಗೂ ಟಿಸಿಎಸ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.

ಬಿಎಸ್ಇಯಲ್ಲಿ ನೋಂದಾಯಿತ ಕಂಪನಿಗಳ ಮಾರುಕಟ್ಟೆ ಮೌಲ್ಯ ₹437 ಲಕ್ಷ ಕೋಟಿಗೆ ಮುಟ್ಟಿದೆ.

ಸೋಲ್, ಟೋಕಿಯೊ ಹಾಗೂ ಶಾಂಘೈ ಮಾರುಕಟ್ಟೆಯಲ್ಲಿ ಸಕಾರಾತ್ಮಕ ವಹಿವಾಟು ನಡೆದರೆ, ಹಾಂಗ್ಕಾಂಗ್ ಮಾರುಕಟ್ಟೆ ಇಳಿಕೆ ದಾಖಲಿಸಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಶುಕ್ರವಾರದ ವಹಿವಾಟಿನಲ್ಲಿ ₹2,175 ಕೋಟಿ ಷೇರುಗಳನ್ನು ಖರೀದಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.