ಮುಂಬೈ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರತಿ ಸುಂಕದ ಬಿಸಿಯು ದೇಶದ ಷೇರುಪೇಟೆಗೂ ತಟ್ಟಿದೆ. ಗುರುವಾರದ ವಹಿವಾಟಿನಲ್ಲಿ ಸೂಚ್ಯಂಕಗಳು ಇಳಿಕೆ ದಾಖಲಿಸಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯ ನಡುವೆಯೂ ರಿಲಯನ್ಸ್ ಇಂಡಸ್ಟ್ರೀಸ್, ಎಲ್ ಆ್ಯಂಡ್ ಟಿ, ಇನ್ಫೊಸಿಸ್ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿವೆ. ಟ್ರಂಪ್ ನೀತಿಯಿಂದ ವ್ಯಾಪಾರ ಸಮರ ಶುರುವಾಗುವ ಭೀತಿ ತಲೆದೋರಿರುವುದು ದೇಶೀಯ ಷೇರುಪೇಟೆಯ ಇಳಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 930 ಅಂಶ ಇಳಿಕೆಯಾಗಿ (ಶೇ 1.22ರಷ್ಟು) 75,364 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು. ಒಂದು ಸಂದರ್ಭದಲ್ಲಿ 1,054 ಅಂಶ ಇಳಿಕೆ ಕಂಡಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 345 ಅಂಶ ಇಳಿಕೆ (ಶೇ 1.49ರಷ್ಟು) ಕಂಡು 22,904 ಅಂಶಗಳಲ್ಲಿ ಸ್ಥಿರಗೊಂಡಿತು.

ಟಾಟಾ ಸ್ಟೀಲ್ ಷೇರಿನ ಮೌಲ್ಯದಲ್ಲಿ ಶೇ 8.59ರಷ್ಟು ಇಳಿಕೆಯಾಗಿದೆ. ಟಾಟಾ ಮೋಟರ್ಸ್, ಎಲ್ ಆ್ಯಂಡ್ ಟಿ, ಅದಾನಿ ಪೋಟ್ಸ್, ಇಂಡಸ್ ಇಂಡ್ ಬ್ಯಾಂಕ್, ಟೆಕ್ ಮಹೀಂದ್ರ, ರಿಲಯನ್ಸ್ ಇಂಡಸ್ಟ್ರೀಸ್, ಸನ್ ಫಾರ್ಮಾ, ಎಚ್ಸಿಎಲ್ ಟೆಕ್ನಾಲಜೀಸ್, ಟಿಸಿಎಸ್, ಇನ್ಫೊಸಿಸ್, ಎನ್ಟಿಪಿಸಿ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.

ಬಜಾಜ್ ಫೈನಾನ್ಸ್, ಎಚ್ಡಿಎಫ್ಸಿ ಬ್ಯಾಂಕ್, ನೆಸ್ಲೆ ಇಂಡಿಯಾ, ಐಸಿಐಸಿಐ ಬ್ಯಾಂಕ್, ಐಟಿಸಿ, ಏಷ್ಯನ್ ಪೇಂಟ್ಸ್ ಮತ್ತು ಎಕ್ಸಿಸ್ ಬ್ಯಾಂಕ್ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ಬಿಎಸ್ಇ ಮಿಡ್ಕ್ಯಾಪ್ ಶೇ 3.08 ಮತ್ತು ಸ್ಮಾಲ್ಕ್ಯಾಪ್ ಸೂಚ್ಯಂಕ ಶೇ 3.43ರಷ್ಟು ಕುಸಿದಿವೆ.

‘ಟ್ರಂಪ್ ನೀತಿಯು ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಮತ್ತು ಹಣದುಬ್ಬರ ಏರಿಕೆಗೆ ದಾರಿ ಮಾಡಿಕೊಡುವ ಸಾಧ್ಯತೆಯಿದೆ. ಇದು ಪ್ರಮುಖ ದೇಶಗಳ ಆರ್ಥಿಕತೆ ಬೆಳವಣಿಗೆ ಮೇಲೂ ಪರಿಣಾಮ ಬೀರಿದೆ. ಈ ಭೀತಿಯಿಂದಾಗಿ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಹಾಗಾಗಿ, ಸೂಚ್ಯಂಕಗಳು ಕುಸಿದಿವೆ’ ಎಂದು ಮೆಹ್ತಾ ಈಕ್ವಿಟಿ ಲಿಮಿಟೆಡ್ನ ಹಿರಿಯ ಉಪಾಧ್ಯಕ್ಷ (ಸಂಶೋಧನೆ) ಪ್ರಶಾಂತ್ ತಾಪ್ಸೆ ಹೇಳಿದ್ದಾರೆ.

ಟೋಕಿಯೊ ಮತ್ತು ಸೋಲ್ ಮಾರುಕಟ್ಟೆಯೂ ಇಳಿಕೆ ಕಂಡಿವೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಶೇ 3.26ರಷ್ಟು ಇಳಿಕೆಯಾಗಿದ್ದು, ಪ್ರತಿ ಬ್ಯಾರೆಲ್ಗೆ 67.85 ಡಾಲರ್ ಆಗಿದೆ. ಕಳೆದ ಮೂರು ವರ್ಷದ ಅವಧಿಯಲ್ಲಿ ಅತಿಹೆಚ್ಚು ಕುಸಿತ ದಾಖಲಿಸಿದ ದಿನ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.