ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 50 ಸಾವಿರದ ಗಡಿ ದಾಟಿದ ಸೆನ್ಸೆಕ್ಸ್

Last Updated 18 ಮೇ 2021, 16:19 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್‌-19ರ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ ಆಗುತ್ತಿರುವುದು ಹೂಡಿಕೆಗಳನ್ನು ಹೆಚ್ಚಿಸಿದೆ. ಇದರಿಂದಾಗಿ ಷೇರುಪೇಟೆಗಳ ವಹಿವಾಟುಮಂಗಳವಾರ ಎರಡು ತಿಂಗಳ ಗರಿಷ್ಠ ಮಟ್ಟದಲ್ಲಿ ಅಂತ್ಯವಾಗಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 50 ಸಾವಿರದ ಗಡಿಯನ್ನು ಮತ್ತೆ ದಾಟಿದೆ. ದಿನದ ವಹಿವಾಟಿನಲ್ಲಿ 612 ಅಂಶ ಏರಿಕೆ ಕಂಡು, 50,193ಕ್ಕೆ ತಲುಪಿತು. ಎರಡು ದಿನಗಳ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹ 5.78 ಲಕ್ಷ ಕೋಟಿಯಷ್ಟು ವೃದ್ಧಿಯಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 185 ಅಂಶ ಏರಿಕೆಯಾಗಿ 15,108ಕ್ಕೆ ತಲುಪಿದೆ.

ಕೋವಿಡ್‌ ಪ್ರಕರಣಗಳಲ್ಲಿ ಇಳಿಕೆ ಮತ್ತು ಆರ್ಥಿಕತೆಯು ವೇಗವಾಗಿ ಚೇತರಿಕೆ ಕಂಡುಕೊಳ್ಳಲಿದೆ ಎನ್ನುವ ಆಶಾವಾದವು ಹೂಡಿಕೆಯನ್ನು ಉತ್ತೇಜಿಸಿತು ಎಂದು ರಿಲಯನ್ಸ್‌ ಸೆಕ್ಯುರಿಟೀಸ್‌ನ ಯೋಜನಾ ಮುಖ್ಯಸ್ಥ ವಿನೋದ್‌ ಮೋದಿ ಹೇಳಿದ್ದಾರೆ.

ಡಾಲರ್‌ ಎದುರು ರೂಪಾಯಿ ಮೌಲ್ಯ 17 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 73.05ರಂತೆ ವಿನಿಮಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT