ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Share Market | ಚೇತರಿಕೆ ಕಂಡ ಸೆನ್ಸೆಕ್ಸ್‌

Published 20 ಆಗಸ್ಟ್ 2024, 13:27 IST
Last Updated 20 ಆಗಸ್ಟ್ 2024, 13:27 IST
ಅಕ್ಷರ ಗಾತ್ರ

ಮುಂಬೈ: ಬ್ಯಾಂಕಿಂಗ್‌, ಹಣಕಾಸು ಮತ್ತು ಆಟೊ ಷೇರುಗಳ ಮಾರಾಟ ಹೆಚ್ಚಳದಿಂದಾಗಿ ಮಂಗಳವಾರ ನಡೆದ ವಹಿವಾಟಿನಲ್ಲಿ ದೇಶದ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆದಿದೆ.  

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ ಚೇತರಿಕೆ ಕಂಡಿದೆ. 378 ಅಂಶ ಏರಿಕೆ ಕಂಡು 80,802 ಅಂಶಗಳಲ್ಲಿ ಸ್ಥಿರಗೊಂಡಿತು. ವಹಿವಾಟಿನ ಒಂದು ಹಂತದಲ್ಲಿ 518 ಅಂಶ ಏರಿಕೆ ಕಂಡಿತ್ತು. 

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 126 ಅಂಶ ಏರಿಕೆ ಕಂಡು, 24,698 ಅಂಶಗಳಲ್ಲಿ ವಹಿವಾಟನ್ನು ಮುಕ್ತಾಯಗೊಳಿಸಿತು. 

ಸೆನ್ಸೆಕ್ಸ್ ಗುಚ್ಛದಲ್ಲಿನ ಬಜಾಜ್‌ ಫಿನ್‌ಸರ್ವ್‌, ಇಂಡಸ್ ಇಂಡ್‌ ಬ್ಯಾಂಕ್‌, ಟೆಕ್ ಮಹೀಂದ್ರ, ಬಜಾಜ್‌ ಫೈನಾನ್ಸ್‌, ಕೋಟಕ್‌ ಮಹೀಂದ್ರ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಎನ್‌ಟಿಪಿಸಿ ಮತ್ತು ಸನ್‌ ಫಾರ್ಮಾ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ. 

ಭಾರ್ತಿ ಏರ್‌ಟೆಲ್‌, ಐಟಿಸಿ, ಅದಾನಿ ಪೋರ್ಟ್ಸ್‌, ಜೆಎಸ್‌ಡಬ್ಲ್ಯು ಸ್ಟೀಲ್‌, ಟಾಟಾ ಮೋಟರ್ಸ್‌ ಷೇರಿನ ಮೌಲ್ಯ ಕುಸಿದಿದೆ. 

ಸೋಲ್‌, ಟೋಕಿಯೊ ಮಾರುಕಟ್ಟೆಯಲ್ಲಿ ಸಕಾರಾತ್ಮಕ ವಹಿವಾಟು ನಡೆದಿದೆ. ಶಾಂಘೈ, ಹಾಂಗ್‌ಕಾಂಗ್‌ ಇಳಿಕೆ ದಾಖಲಿಸಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಶೇ 0.72ರಷ್ಟು ಇಳಿಕೆಯಾಗಿದ್ದು, ಪ್ರತಿ ಬ್ಯಾರೆಲ್‌ಗೆ 77.10 ಡಾಲರ್‌ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT