ಮುಂಬೈ: ದೇಶದ ಷೇರುಪೇಟೆ ಸೂಚ್ಯಂಕಗಳು ಸೋಮವಾರ ಆರಂಭಿಕ ವಹಿವಾಟಿನಲ್ಲಿ ಇಳಿಕೆ ಕಂಡಿವೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಸುಮಾರು ಶೇ 3ರಷ್ಟು ಕುಸಿತ ಕಂಡಿದ್ದು, ಹೂಡಿಕೆದಾರರ ಭಾವನೆಗಳ ಮೇಲೆ ಭಾರಿ ಪರಿಣಾಮ ಬೀರಿದೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸಕ್ಸ್ 2,345 ಅಂಶ (ಶೇ 2.97ರಷ್ಟು) ಕುಸಿದು 76,573ಕ್ಕೆ ವಹಿವಾಟು ಆರಂಭಿಸಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 708 ಅಂಶ (ಶೇ 2.89ರಷ್ಟು) ಇಳಿಕೆಯಾಗಿ, 23,741ಕ್ಕೆ ತಲುಪಿವೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧವು 11ನೇ ದಿನಕ್ಕೆ ಕಾಲಿಟ್ಟಿರುವುದು ಮತ್ತು ಕಚ್ಚಾ ತೈಲ ಬೆಲೆಯಲ್ಲಿನ ಹೆಚ್ಚಳವು ದೇಶದ ಷೇರುಪೇಟೆಗಳ ಮೇಲೆ ಪರಿಣಾಮ ಬೀರಿದ್ದರಿಂದ ಸೂಚ್ಯಂಕಗಳು ಇಳಿಕೆ ಕಂಡಿವೆ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.

ವಿದೇಶಿ ಬಂಡವಾಳದ ಹೊರಹರಿವು ಸಹ ಸೂಚ್ಯಂಕಗಳ ಇಳಿಕೆಗೆ ಕಾರಣವಾದವು ಎಂದು ಅವರು ತಿಳಿಸಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ದರವು ಶೇ 2.53ರಷ್ಟು ಹೆಚ್ಚಳವಾಗಿದ್ದು, ಪ್ರತೀ ಬ್ಯಾರಲ್ ದರವು 87.57 ಡಾಲರ್ ಆಗಿದೆ.

ಸೆನ್ಸೆಕ್ಸ್ ಸೂಚ್ಯಂಕದ ಭಾಗವಾಗಿರುವ ಇಂಟರ್ಗ್ಲೋಬ್ ಏವಿಯೇಷನ್ ಶೇ 8ರಷ್ಟು ಕುಸಿತ ಕಂಡಿದೆ. ಟಾಟಾ ಸ್ಟೀಲ್, ಮಾರುತಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಟರ್ನಲ್, ಏಷ್ಯನ್ ಪೇಂಟ್ಸ್ ಮತ್ತು ಐಸಿಐಸಿಐ ಬ್ಯಾಂಕ್ ಸಹ ನಷ್ಟ ಅನುಭವಿಸಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ದರವು ಪ್ರತೀ ಬ್ಯಾರಲ್ ದರವು ಶೇ 23.63ರಷ್ಟು ಹೆಚ್ಚಳವಾಗಿದ್ದು, ಪ್ರತೀ ಬ್ಯಾರಲ್ ದರವು 114 ಡಾಲರ್ ಆಗಿದೆ.

ಶುಕ್ರವಾರ ಸೆನ್ಸೆಕ್ಸ್ 1,097 ಅಂಶ (ಶೇ 1.37ರಷ್ಟು) ಕುಸಿದು 78,918.90ಕ್ಕೆ ವಹಿವಾಟು ಅಂತ್ಯಗೊಂಡಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 315 ಅಂಶ (ಶೇ 1.27ರಷ್ಟು) ಇಳಿಕೆಯಾಗಿ, 24,450ಕ್ಕೆ ಕೊನೆಗೊಂಡಿತ್ತು.
.ಇರಾನ್ ನೂತನ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಾಬಾ ನೇಮಕ.Iran-Israel War | ಹಾರ್ಮುಜ್ ಜಲಸಂಧಿ ಬಂದ್: ಕಚ್ಚಾ ತೈಲ ಬೆಲೆ ಭಾರಿ ಏರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.