ಮುಂಬೈ / ನವದೆಹಲಿ : ಕಚ್ಚಾ ತೈಲ ಬೆಲೆ ಏರಿಕೆ ಮತ್ತು ವಿದೇಶಿ ಬಂಡವಾಳದ ಹೊರಹರಿವಿ ನಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಗುರುವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 582 ಅಂಶ ಇಳಿಕೆಯಾಗಿ, 76,913ಕ್ಕೆ ವಹಿವಾಟು ಕೊನೆಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 180 ಅಂಶ ಕಡಿಮೆಯಾಗಿ, 23,997ಕ್ಕೆ ಅಂತ್ಯಗೊಂಡಿದೆ.

ಚಿನ್ನದ ದರ ಏರಿಕೆ, ಬೆಳ್ಳಿ ಇಳಿಕೆ: ದೆಹಲಿಯ ಚಿನಿವಾರ ಪೇಟೆಯಲ್ಲಿ ಗುರುವಾರದ ವಹಿವಾಟಿನಲ್ಲಿ ಚಿನ್ನದ ದರವು ಏರಿಕೆಯಾಗಿದೆ, ಬೆಳ್ಳಿ ಬೆಲೆಯು ಇಳಿದಿದೆ. 10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹2 ಸಾವಿರ ಹೆಚ್ಚಳವಾಗಿ, ₹1,54,800ರಂತೆ ಮಾರಾಟವಾಗಿದೆ. ಬೆಳ್ಳಿ ಬೆಲೆಯು ಕೆ.ಜಿಗೆ ₹1,800 ಕಡಿಮೆಯಾಗಿ, ₹2,42,700ಕ್ಕೆ ಇಳಿದಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ರೂಪಾಯಿ ಮೌಲ್ಯ ಏರಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯವು 4 ಪೈಸೆ ಏರಿಕೆಯಾಗಿ, ವಹಿವಾಟಿನ ಅಂತ್ಯದ ವೇಳೆಗೆ 94.84 ಆಗಿದೆ. ವಹಿವಾಟಿನ ಒಂದು ಸಂದರ್ಭದಲ್ಲಿ ರೂಪಾಯಿ ಮೌಲ್ಯವು 95.34 ಕ್ಕೆ ಇಳಿದಿತ್ತು. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-51-119470627

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.