ಮುಂಬೈ: ಮಾಹಿತಿ ತಂತ್ರಜ್ಞಾನ, ವಾಹನ ಕಂಪನಿಗಳು ಮತ್ತು ಬ್ಯಾಂಕಿಂಗ್ ಷೇರುಗಳ ಖರೀದಿ ಹೆಚ್ಚಳದಿಂದ ಸೋಮವಾರದ ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಏರಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 554 ಅಂಶ ಹೆಚ್ಚಳವಾಗಿ, 80,364ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ನಿಫ್ಟಿ) 198 ಅಂಶ ಏರಿಕೆಯಾಗಿ, 24,625ಕ್ಕೆ ಕೊನೆಗೊಂಡಿದೆ.

‘ಜಾಗತಿಕ ಅನಿಶ್ಚಿತತೆಯ ನಡುವೆಯೂ ದೇಶದ ಜಿಡಿಪಿ ಬೆಳವಣಿಗೆಯು ಜೂನ್ ತ್ರೈಮಾಸಿಕದಲ್ಲಿ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಾಗಿದೆ. ಇದು ಹೂಡಿಕೆದಾರರಲ್ಲಿ ವಿಶ್ವಾಸವನ್ನು ಹೆಚ್ಚಿಸಿದೆ. ಅಲ್ಲದೆ, ಬುಧವಾರದಿಂದ ನಡೆಯಲಿರುವ ಜಿಎಸ್ಟಿ ಮಂಡಳಿಯ ಸಭೆಯ ಬಗ್ಗೆ ಹೂಡಿಕೆದಾರರಲ್ಲಿ ಆಶಾಭಾವನೆ ಇದೆ. ಹೀಗಾಗಿ, ಷೇರುಪೇಟೆ ಸೂಚ್ಯಂಕಗಳು ಏರಿಕೆ ಕಂಡಿವೆ’ ಎಂದು ಜಿಯೊಜಿತ್ ಇನ್ವೆಸ್ಟ್ಮೆಂಟ್ ಲಿಮಿಟೆಡ್ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.92ರಷ್ಟು ಏರಿಕೆ ಆಗಿದೆ. ಪ್ರತೀ ಬ್ಯಾರೆಲ್ ದರವು 68.10 ಡಾಲರ್ ಆಗಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಶುಕ್ರವಾರದ ವಹಿವಾಟಿನಲ್ಲಿ ₹8,312 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರು. ದೇಶೀಯ ಸಾಂಸ್ಥಿಕ ಹೂಡಿಕೆದಾರರು ₹11,487 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.