ಮುಂಬೈ/ನವದೆಹಲಿ: ಅಮೆರಿಕ–ಇರಾನ್ ನಡುವೆ ಮಾತುಕತೆ ವಿಫಲಗೊಂಡಿರುವುದರಿಂದ ಪಶ್ಚಿಮ ಏಷ್ಯಾದ ಬಿಕ್ಕಟ್ಟು ಹೆಚ್ಚಳವಾಗುವ ಆತಂಕ ಸೃಷ್ಟಿಯಾಗಿದೆ. ಇದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಸೋಮವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 702 ಅಂಶ ಇಳಿಕೆಯಾಗಿ, 76,847ಕ್ಕೆ ವಹಿವಾಟು ಕೊನೆಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 207 ಅಂಶ ಕಡಿಮೆಯಾಗಿ, 23,842ಕ್ಕೆ ಅಂತ್ಯಗೊಂಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 7.73ರಷ್ಟು ಏರಿಕೆಯಾಗಿದ್ದು, ಪ್ರತೀ ಬ್ಯಾರಲ್ ದರವು 102.6 ಡಾಲರ್ ಆಗಿದೆ.

ಚಿನ್ನ, ಬೆಳ್ಳಿ ದರ ಇಳಿಕೆ: ದೆಹಲಿಯ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹300ರಷ್ಟು ಇಳಿಕೆಯಾಗಿ, ₹1.55 ಲಕ್ಷದಂತೆ ಮಾರಾಟವಾಗಿದೆ. ಬೆಳ್ಳಿ ದರವು ಕೆ.ಜಿಗೆ ₹1,800ರಷ್ಟು ಕಡಿಮೆಯಾಗಿ, ₹2,45,200 ಆಗಿದೆ.

ರೂಪಾಯಿ ಮೌಲ್ಯ ಕುಸಿತ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರ ಡಾಲರ್ ಎದುರು ರೂಪಾಯಿ ಮೌಲ್ಯವು 56 ಪೈಸೆ ಇಳಿಕೆಯಾಗಿದೆ. ವಹಿವಾಟಿನ ಅಂತ್ಯದ ವೇಳೆಗೆ ರೂಪಾಯಿ ಮೌಲ್ಯವು 93.39 ಆಗಿದೆ.

ಅಮೆರಿಕ–ಇರಾನ್ ಮಾತುಕತೆ ವಿಫಲ ಆಗಿರುವುದು ಮತ್ತು ಕಚ್ಚಾ ತೈಲ ದರ ಏರಿಕೆಯಾಗಿರುವುದು ರೂಪಾಯಿ ಮೇಲೆ ಒತ್ತಡ ಹೇರಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.