ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್, ಎಚ್ಡಿಎಫ್ಸಿ ಬ್ಯಾಂಕ್ ಸೇರಿದಂತೆ ವಿವಿಧ ವಲಯಗಳಿಗೆ ಸೇರಿದ ಕಂಪನಿಗಳ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ಷೇರುಪೇಟೆ ಸೂಚ್ಯಂಕಗಳು ಗುರುವಾರದ ವಹಿವಾಟಿನಲ್ಲಿ ಶೇ 1.5ರಷ್ಟು ಕುಸಿತ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1,236 ಅಂಶ (ಶೇ 1.48ರಷ್ಟು) ಇಳಿಕೆಯಾಗಿ, 82,498ಕ್ಕೆ ವಹಿವಾಟು ಅಂತ್ಯಗೊಂಡಿವೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 365 ಅಂಶ (ಶೇ 1.41) ಕಡಿಮೆಯಾಗಿ, 25,454ಕ್ಕೆ ಕೊನೆಗೊಂಡಿದೆ.

ಷೇರುಪೇಟೆ ಸೂಚ್ಯಂಕಗಳ ಇಳಿಕೆಯಿಂದ ಹೂಡಿಕೆದಾರರ ಸಂಪತ್ತು ಒಂದೇ ದಿನ ₹6.79 ಲಕ್ಷ ಕೋಟಿಯಷ್ಟು ಕರಗಿದೆ.

‘ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಬಿಕ್ಕಟ್ಟು ಜಾಗತಿಕವಾಗಿ ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ. ಇದರಿಂದ ದೇಶದ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಸೂಚ್ಯಂಕಗಳು ಇಳಿಕೆ ಕಂಡಿವೆ’ ಎಂದು ಜಿಯೋಜಿತ್ ಇನ್ವೆಸ್ಟ್ಮೆಂಟ್ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಕಚ್ಚಾ ತೈಲದ ದರ ಹೆಚ್ಚಳ, ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿ ದರ ಕಡಿತ ಮಾಡುವುದರ ಸುತ್ತಲಿನ ಅನಿಶ್ಚಿತತೆ ಮತ್ತು ರೂಪಾಯಿ ಮೌಲ್ಯ ಇಳಿಕೆಯು ದೇಶದ ಷೇರುಪೇಟೆ ಸೂಚ್ಯಂಕಗಳ ಇಳಿಕೆಗೆ ಕಾರಣವಾದವು ಎಂದು ತಿಳಿಸಿದ್ದಾರೆ.

ಏಷ್ಯಾದ ವಿವಿಧ ಮಾರುಕಟ್ಟೆಗಳಲ್ಲಿ ಹೊಸ ವರ್ಷದ (ಲೂನಾರ್ ನ್ಯೂ ಇಯರ್) ಪ್ರಯುಕ್ತ ಬುಧವಾರ ರಜೆ ಇತ್ತು. ಇದರಿಂದ ವಿದೇಶಿ ಹೂಡಿಕೆದಾರರು ಹೆಚ್ಚಿನ ಪ್ರಮಾಣದಲ್ಲಿ ವಹಿವಾಟಿನಲ್ಲಿ ಭಾಗವಹಿಸಿಲ್ಲ. ಇದು ಸಹ ಸೂಚ್ಯಂಕಗಳ ಇಳಿಕೆಗೆ ಕಾರಣವಾದವು ಎಂದು ಹೇಳಿದ್ದಾರೆ.

ಹೊರ್ಮುಜ್ ಜಲಸಂಧಿಯ ಮೂಲಕ ದೇಶಕ್ಕೆ ಕಚ್ಚಾ ತೈಲ ಆಮದಾಗುತ್ತದೆ. ಅಮೆರಿಕ ಮತ್ತು ಇರಾನ್ ನಡುವೆ ಬಿಕ್ಕಟ್ಟು ಹೆಚ್ಚಳವಾದರೆ ಅದು ಹೊರ್ಮುಜ್ ಜಲಸಂಧಿಯ ಮೂಲಕ ಆಗುವ ಸಾಗಣೆ ಮೇಲೆ ಪರಿಣಾಮ ಬೀರಲಿದೆ. ಇದು ಭಾರತದ ಕಚ್ಚಾ ತೈಲ ಆಮದಿನ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 1.02ರಷ್ಟು ಹೆಚ್ಚಳವಾಗಿದೆ. ಪ್ರತೀ ಬ್ಯಾರಲ್ ದರವು 71.07 ಡಾಲರ್ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.