ಮುಂಬೈ: ಎಫ್ಎಂಸಿಜಿ, ವಾಹನ ಮತ್ತು ದೂರಸಂಪರ್ಕ ಕಂಪನಿಗಳ ಷೇರುಗಳ ಖರೀದಿ ಹೆಚ್ಚಳದಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಬುಧವಾರದ ವಹಿವಾಟಿನಲ್ಲಿ ಏರಿಕೆಯಾಗಿವೆ.

ಏಷ್ಯಾದ ಮಾರುಕಟ್ಟೆಯು ಸಕಾರಾತ್ಮಕ ವಹಿವಾಟು ನಡೆಸಿದೆ. ಇದು ಕೂಡ ದೇಶದ ಷೇರುಪೇಟೆಗೆ ಸೂಚ್ಯಂಕಗಳ ಏರಿಕೆಗೆ ನೆರವಾಯಿತು ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 609 ಅಂಶ ಹೆಚ್ಚಳವಾಗಿ, 77,496ಕ್ಕೆ ವಹಿವಾಟು ಅಂತ್ಯಗೊಂಡಿದೆ. ವಹಿವಾಟಿನ ವೇಳೆ ಸೂಚ್ಯಂಕವು 1,095 ಅಂಶಗಳವರೆಗೆ ಜಿಗಿದಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 181 ಅಂಶ ಏರಿಕೆಯಾಗಿ, 24,177ಕ್ಕೆ ಕೊನೆಗೊಂಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 2.85ರಷ್ಟು ಏರಿಕೆಯಾಗಿದ್ದು, ಪ್ರತೀ ಬ್ಯಾರಲ್ ದರವು 114.4 ಡಾಲರ್ ಆಗಿದೆ.

ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಗಳ ಗಳಿಕೆ ಉತ್ತಮವಾಗಿರುವ ನಿರೀಕ್ಷೆಯನ್ನು ಹೂಡಿಕೆದಾರರು ಹೊಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಸಂಘರ್ಷವು ಕಡಿಮೆ ಆಗುವ ನಿರೀಕ್ಷೆ ಇದೆ. ಇದು ದೇಶದ ಷೇರುಪೇಟೆ ಸೂಚ್ಯಂಕಗಳ ಏರಿಕೆಗೆ ಕಾರಣವಾದವು ಎಂದು ಲೈವ್ಲಾಂಗ್ ವೆಲ್ತ್ನ ಸಂಶೋಧನಾ ವಿಶ್ಲೇಷಕ ಮತ್ತು ಸಂಸ್ಥಾಪಕ ಹರಿಪ್ರಸಾದ್ ಕೆ. ಹೇಳಿದ್ದಾರೆ.

ರೂಪಾಯಿ ಮೌಲ್ಯ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ ಡಾಲರ್ ಎದುರು ರೂಪಾಯಿ ಮೌಲ್ಯ 20 ಪೈಸೆ ಇಳಿದಿದೆ. ವಹಿವಾಟಿನ ಅಂತ್ಯದ ವೇಳೆಗೆ ರೂಪಾಯಿ ಮೌಲ್ಯ 94.88 ಆಗಿದೆ. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ. ಕಚ್ಚಾ ತೈಲ ಬೆಲೆ ಏರಿಕೆ ಮತ್ತು ವಿದೇಶಿ ಬಂಡವಾಳದ ಹೊರಹರಿವು ರೂಪಾಯಿ ಮೌಲ್ಯ ಇಳಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.