ಮುಂಬೈ: ದೇಶದ ಷೇರುಪೇಟೆಗಳಲ್ಲಿ ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡಿದ್ದ ಷೇರು ಸೂಚ್ಯಂಕಗಳು, ವಹಿವಾಟಿನ ಅಂತ್ಯಕ್ಕೆ ಇಳಿಕೆ ಕಂಡಿವೆ. ಬ್ಯಾಂಕಿಂಗ್ ಮತ್ತು ಟೆಲಿಕಾಂ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ಮಾರುಕಟ್ಟೆಯಲ್ಲಿ ನಕಾರಾತ್ಮಕ ವಹಿವಾಟು ನಡೆಯಿತು.
ಸತತ ಮೂರು ವಹಿವಾಟು ದಿನಗಳಿಂದ ಹೂಡಿಕೆದಾರರ ಸಂಪತ್ತು ₹22 ಲಕ್ಷ ಕೋಟಿ ಕರಗಿದೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 166 ಅಂಶ ಇಳಿಕೆಯಾಗಿ, 78,593ಕ್ಕೆ ಅಂತ್ಯಗೊಂಡಿತು. ವಹಿವಾಟಿನ ಒಂದು ಸಂದರ್ಭದಲ್ಲಿ 1,092 ಅಂಶ ಏರಿಕೆ ಆಗಿತ್ತು.
ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 63 ಅಂಶ ಕಡಿಮೆಯಾಗಿ, 23,992ಕ್ಕೆ ಸ್ಥಿರಗೊಂಡಿತು. ವಹಿವಾಟಿನ ವೇಳೆ 327 ಅಂಶ ಏರಿಕೆ ಕಂಡಿತ್ತು.