ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಧಾ ಮೂರ್ತಿ ₹5,600 ಕೋಟಿ ಮೌಲ್ಯದ ಷೇರುಗಳ ಒಡತಿ

Published 9 ಮಾರ್ಚ್ 2024, 0:30 IST
Last Updated 9 ಮಾರ್ಚ್ 2024, 0:30 IST
ಅಕ್ಷರ ಗಾತ್ರ

ನವದೆಹಲಿ: ಇನ್ಫೊಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು, ಇನ್ಫೊಸಿಸ್‌ ಕಂಪನಿಯಲ್ಲಿ ₹5,600 ಕೋಟಿ ಮೌಲ್ಯದ ಷೇರುಗಳನ್ನು ಹೊಂದಿದ್ದಾರೆ.  ‌

ಮೂರ್ತಿ ಟ್ರಸ್ಟ್‌ನ ಅಧ್ಯಕ್ಷೆಯೂ ಆಗಿ ಸೇವೆ ಸಲ್ಲಿಸುತ್ತಿರುವ ಅವರು, ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. 

ಸುಧಾ ಅವರು, 3.45 ಕೋಟಿ ಷೇರುಗಳನ್ನು (ಶೇ 0.83) ಹೊಂದಿದ್ದಾರೆ. ಬಿಎಸ್‌ಇಯಲ್ಲಿ ಪ್ರತಿ ಷೇರಿನ ಬೆಲೆ ₹1,616.95 ಆಗಿದೆ ಎಂದು ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ಗೆ ಕಂಪನಿಯು ತಿಳಿಸಿದೆ.

ಸುಧಾ ಅವರ ಪತಿ ನಾರಾಯಣಮೂರ್ತಿ ಅವರು, 1.66 ಕೋಟಿ ಈಕ್ವಿಟಿ ಷೇರುಗಳನ್ನು ಹೊಂದಿದ್ದು, ಇವುಗಳ ಮೌಲ್ಯ ₹2,691 ಕೋಟಿ ಆಗಿದೆ. ‌

2006ರಲ್ಲಿ ಪದ್ಮಶ್ರೀ ಪುರಸ್ಕೃತರಾಗಿದ್ದ ಸುಧಾ ಅವರಿಗೆ ಕಳೆದ ಜನವರಿಯಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಲಾಗಿತ್ತು. ಶುಕ್ರವಾರ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT