ಗುರುವಾರ , ಜೂನ್ 4, 2020
27 °C

₹20 ಲಕ್ಷ ಕೋಟಿ ಪ್ಯಾಕೇಜ್‌: ಷೇರುಪೇಟೆಯಲ್ಲಿ ಉತ್ಸಾಹ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರವು ₹20 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್‌ ಘೋಷಿಸಿರುವುದು ಷೇರುಪೇಟೆಗಳಲ್ಲಿ  ಖರೀದಿ ಉತ್ಸಾಹ ಹೆಚ್ಚಿಸಿತು.

ಎರಡು ದಿನಗಳಿಂದ ಇಳಿಮುಖವಾಗಿದ್ದ ವಹಿವಾಟು ಬುಧವಾರ ಚೇತರಿಕೆ ಹಾದಿಗೆ ಮರಳಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ ದಿನದ ವಹಿವಾಟಿನಲ್ಲಿ 1,474 ಅಂಶಗಳವರೆಗೆ ಗರಿಷ್ಠ ಜಿಗಿತ ಕಂಡಿತ್ತು. ಆದರೆ, ದಿನದ ಅಂತ್ಯಕ್ಕೆ ಗಳಿಕೆಯು 637 ಅಂಶಗಳಿಗೆ ಇಳಿಕೆ ಕಂಡಿತು. 32,008 ಅಂಶಗಳಲ್ಲಿ ವಹಿವಾಟು ಮುಕ್ತಾಯವಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 187 ಅಂಶ ಹೆಚ್ಚಾಗಿ 9,383 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಬ್ಯಾಂಕಿಂಗ್‌ ಷೇರುಗಳು ಶೇ 7ರವರೆಗೆ ಗಳಿಕೆ ಕಂಡಿವೆ.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 5 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 75.46 ರಂತೆ ವಿನಿಮಯಗೊಂಡಿತು.

1.97%: ಬಿಎಸ್‌ಇ ಮಧ್ಯಮ, ಸಣ್ಣ ಶ್ರೇಣಿ ಸೂಚ್ಯಂಕಗಳ ಗಳಿಕೆ

7.02%: ಆ್ಯಕ್ಸಿಸ್‌ ಬ್ಯಾಂಕ್‌ ಷೇರು ಗಳಿಕೆ 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು